ಶಾಸಕ ಮಹೇಶ ಟಿಂಗಿನಕಾಯಿ ಹೇಳಿಕೆ
ಬೆಳಗಾವಿ:
ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನ ಸೆ. 17ರಿಂದ ಅಕ್ಟೋಬರ್ 2 ಮಹಾತ್ಮ ಗಾಂಧಿ ಜನ್ಮ ದಿನದವರೆಗೆ ದೇಶದಾದ್ಯಂತ ಸೇವಾ ಪಾಕ್ಷಿಕ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಭಾಗಿವಹಿಸಿ ಯಶಸ್ವಿಗೊಳಿಸಬೇಕು ಎಂದು ಶಾಸಕ ಮಹೇಶ ಟಿಂಗಿನಕಾಯಿ ಹೇಳಿದರು.

ನಗರದ ಬಿಜೆಪಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸೇವಾ ಪಾಕ್ಸಿಕ್ ಅಭಿಯಾನ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,ಸೇವಾ ಪಾಕ್ಷಿಕ ಅಭಿಯಾನದ ಅವಧಿಯಲ್ಲಿ ವಿವಿಧ ಸೇವಾ ಚಟುವಟಿಗಳ ಮೂಲಕ ದೇಶದ ಕಟ್ಟ ಕಡೆಯ ವ್ಯಕ್ತಿಗೂ ತಲುಪುವುದು ನಮ್ಮ ಉದ್ದೇಶವಾಗಿದೆ.

ಕಳೆದ ವರ್ಷದ ರೀತಿಯಲ್ಲಿಯೇ ಈ ವರ್ಷವೂ ಅಭಿಯಾನವನ್ನು ಅರ್ಥಪೂರ್ಣವಾಗಿ ನಡೆಸಬೇಕು ಎಂದು ತಿಳಿಸಿದರು.
ದೇಶದ್ಯಾದ್ಯಂತ ಏಕಕಾಲದಲ್ಲಿ ಆರಂಭವಾಗುವ ಅಭಿಯಾನದಲ್ಲಿ ಕೇಂದ್ರ ಸಚಿವರು, ಸಂಸದರು, ಪಕ್ಷದ ಶಾಸಕರು, ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ನಗರ ಮತ್ತು ಗ್ರಾಮೀಣ ಭಾಗದಲ್ಲಿ ಅಧಿಕ ಸಂಖ್ಯೆಯಲ್ಲಿ ಜನರು ಅಭಿಯಾನದಲ್ಲಿ ಭಾಗವಹಿಸುವ ರೀತಿಯಲ್ಲಿ ಕಾರ್ಯಕ್ರಮ ರೂಪಿಸಬೇಕು ಎಂದರು.
ನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಮೇಯರ್ ಮಂಗೇಶ ಪವಾರ್, ಉಪಮೇಯರ್ ವಾಣಿ ಜೋಶಿ, ಪಾಲಿಕೆ ಆಡಳಿತ ಪಕ್ಷದ ನಾಯಕ ಹಣಮಂತ ಕೊಂಗಾಲಿ, ಪ್ರಧಾನ ಕಾರ್ಯದರ್ಶಿ ಈರಯ್ಯ ಖೋತ, ರಾಜಶೇಖರ ಢೋನಿ ಇತರರಿದ್ದರು.