ಸೌಧದಲ್ಲಿ ಪೂಜೆಗೆ ಅರಿಷಿನ ಬಳಸುವಂತಿಲ್ಲ

ಬೆಂಗಳೂರು.

ಹಿಂದೂ ಧರ್ಮದಲ್ಲಿ ಕುಂಕುಮ ಮತ್ತು ಅರಿಶಿನಕ್ಕೆ ಪವಿತ್ರ ಸ್ಥಾನವಿದೆ. ಯಾವುದೇ ಪೂಜೆ ಅಥವಾ ಇನ್ನಿತರ ಶುಭ ಸಮಾರಂಭಗಳಲ್ಲಿ ಇವುಗಳನ್ನು ವಿಶೇಷವಾಗಿ ಬಳಸಲಾಗುತ್ತದೆ. ಮತ್ತು ಪೂಜನೀಯ ಸ್ಥಾನವನ್ನು ನೀಡುತ್ತಾರೆ. ವಿವಾಹಿತ ಸ್ತ್ರೀಯರು ತಮ್ಮ ಕೆನ್ನೆಗೆ ಅರಿಶಿನವನ್ನು ಹಣೆಗೆ ಕುಂಕುಮದ ಸಿಂಧೂರವನ್ನಿಟ್ಟು ತಮ್ಮ ಮುತ್ತೈದೆತನವನ್ನು ಸಂಕೇತಿಸುತ್ತಾರೆ.
ಅಲ್ಲದೆ ಕುಂಕುಮ ಮತ್ತು ಅರಿಶಿನ ತನ್ನದೇ ಆದ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದು ಅರಿಶಿನವು ಬರಿಯ ಅಲಂಕಾರಿಕ ಇಲ್ಲವೇ ಪೂಜನೀಯ ಸಾಮಾಗ್ರಿಯಾಗಿ ಹೆಸರು ಪಡೆದುಕೊಂಡಿರುವುದು ಮಾತ್ರವಲ್ಲದೆ ಆರೋಗ್ಯ ಕ್ಷೇತ್ರದಲ್ಲಿ ಕೂಡ ಅರಿಶಿನ ಗಣನೀಯ ಸ್ಥಾನವನ್ನು ಪಡೆದುಕೊಂಡಿದೆ. ಮನೆಮದ್ದಾಗಿ ಎಲ್ಲರ ಮನೆಯಲ್ಲೂ ಸ್ಥಾನವನ್ನು ಪಡೆದುಕೊಂಡಿರುವ ಅರಶಿನ ಒಂದು ರೀತಿಯಲ್ಲಿ ಸಂಜೀವಿನಿಯಾಗಿದೆ

ಆದರೆ ರಾಜ್ಯದ ಸಿದ್ಧರಾಮಯ್ಯ ನೇತ್ರತ್ವದ‌ ಸರ್ಕಾರ ಇನ್ನು ಮುಂದೆ ವಿಧಾನಸೌಧ, ವಿಕಾಸಸೌಧ ಸೇರಿದಂತೆ‌ ಬಹುಮಹಡಿ ಕಟ್ಟಡದಲ್ಲಿ ರಾಸಾಯನಿಕ ಮಿಶ್ರಿತ ಇರುವ ಅರಿಷಿನ ಕುಂಕುಮ ಬಳಕೆ ಮಾಡದಿರುವಂತಡ ಆದೇಶ ಹೊರಡಿಸಿದೆ.

ಆದೇಶದಲ್ಲಿನ ಅಂಶವನ್ನು ಗಮನಿಸಿದರೆ ಇದು ಹಿಂದೂ ಸಂಸ್ಕತಿ ವಿರೋಧಿ ಸರ್ಕಾರ ಎನ್ನುವುದು ಸ್ಪಷ್ಟವಾಗುತ್ತದೆ.

ಏನಿದೆ ಪತ್ರದಲ್ಲಿ?

ವಿಧಾನಸೌಧ, ವಿಕಾಸಸೌಧ ಬಹುಮಹಡಿ ಕಟ್ಟಡಗಳಲ್ಲಿ ಆಯುಧ ಪೂಜೆ ಸಮಯದಲ್ಲಿ ಕಛೇರಿಗಳ ಒಳಗೆ ಮತ್ತು ಕಾರಿಚಾರ್‌ಗಳಲ್ಲಿ ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ಬಳಸುವುದರಿಂದ ಹಾನಿಕಾರಕ ಬಣ್ಣವು ಸುಹಾಸಿನ ಮೇಲೆ ಬಿದ್ದು, ಸುಮಾರು ತಿಂಗಳುಗಳ ಕಾಲ ಹಾಗೆಯೇ ಹಾಸುವಿನ ಮೇಲೆ ಅಂಟಿಕೊಂಡು ಉಳಿಯುತ್ತಿರುವುದರಿಂದ ವಿಧಾನಸೌಧ ವಿಕಾಸಸೌಧ, ಬಹುಮಹಡಿ ಕಟ್ಟಡದ ನೆಲಹಾಸುಗಳ ಸೌಂದರ್ಯಕ್ಕೆ ದಕ್ಕೆಯುಂಟಾಗುತ್ತದೆ. ಈ ಕುರಿತಂತೆ ಹಿಂದಿನ ಸಾಲುಗಳಲ್ಲಿಯೂ ಸಹ ಅನೇಕ ಸುತ್ತೋಲೆಗಳನ್ನು ಹೊರಡಿಸಿದ್ದಾಗ್ಯೂ, ಕೆಲವು ಇಲಾಖೆ/ಶಾಖೆಗಳಲ್ಲಿ ಈ ಸೂಚನೆಗಳನ್ನು ಪಾಲನೆ ಮಾಡದಿರುವುದು ವಿಷಾದನೀಯ.
ಆದುದರಿಂದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ 2023ರ ಅಕ್ಟೋಬರ್ ಮಾಷೆಯಲ್ಲಿ ಆಯುಧ ಪೂಜೆ ನೆರವೇರಿಸುವಾಗ ಕಛೇರಿಯ ಒಳಗೆ ಕಾರಿಡಾರ್‌ಗಳಲ್ಲಿ ಕುಂಬಳಕಾಯಿ ಮತ್ತು ರಂಗೋಲಿಗಳಲ್ಲಿ ಯಾವುದೇ ರೀತಿಯ ರಾಸಾಯನಿಕ ಮಿಶ್ರಿತ ಬಣ್ಣ ಹಾಕುವ ಅರಿತಹ ಹಾಗೂ ಇನ್ನಿತರೆ ವಸ್ತುಗಳನ್ನು ಕಡ್ಡಾಯವಾಗಿ ಬಳಸದಂತೆ ಈ ಮೂಲಕ ತಿಳಿಸಲಾಗಿದೆ.

, ಪೂಜಾ ದಿನದಂದು ಕಣ್ಣೀರಿಯದ ಹರಡುವ ಮುನ್ನ ದೀಪಗಳನ್ನು ಹಾಗೂ ವಿದ್ಯುತ್‌ ಸ್ವಿಚ್‌ಗಳನ್ನು ನಂದಿಸಿ ತೆಗಳುವಂತೆ ಸೂಚಿಸಲಾಗಿದೆ. ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಡದೇ ವ್ಯವಸ್ಥಿತವಾಗಿ ವಿಲೇವಾರಿ ಮಾಡಿದ್ದು,

ಪಾರಂಪರಿಕ ಕಟ್ಟಡಗಳ ಸೌಂದರ್ಯವನ್ನು ಕಟಪಾಡುವುದು ಪ್ರತಿಯೊಬ್ಬ ಅಧಿಕಾರಿ/ನೌಕರರ ಅದ್ಯ ಕರ್ತವ್ಯವಾಗಿದ್ದು, ಮೇಲೆ ತಿಳಿಸಲಾದ ಸೂಚನೆಗಳನ್ನು ಸ್ವಪ್ರೇರಿತರಾಗಿ ಪಾಲಿಸುವ ಮನಸ್ಥಿತಿಯನ್ನು ಮೇಲೆ ಅನಿವಾರ್ಯವಾಗಿ ಜವಾಬ್ದಾರಿಯನ್ನು ನಿಗಧಿಪಡಿಸಬೇಕಾಗುತ್ತದೆಂದು ಈ ಮೂಲಕ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!