ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಹೇಳಿಕೆ
ಬೆಳಗಾವಿಗೆ ಲಿಂಗಾಯತ.
ಚಿಕ್ಕೊಡಿಗೆ ಕುರುಬ ಸಮಾಜಕ್ಕೆ ಟಿಕೆಟ್
ಬೆಳಗಾವಿ:
ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಲಿಂಗಾಯತ, ಚಿಕ್ಕೋಡಿ ಕ್ಷೇತ್ರಕ್ಕೆ ಕುರುಬ ಸಮಾಜದ ಅಭ್ಯಥರ್ಿಗೆ ಟಿಕೆಟ್ ನೀಡಲು ಚಿಂತನೆ ನಡೆದಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು,
ರಾಜ್ಯದ 20 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಗೆಲುವಿಗೆ ಗುರಿ ಇಟ್ಟುಕೊಳ್ಳಲಾಗಿದೆ ಎಂದರು.

ಈಗಾಗಲೇ ಲೋಕಸಭೆ ಚುನಾವಣೆಗೆ ತಯಾರಿ ನಡೆದಿದೆ. ಕಾರ್ಯಕರ್ತರು ಚುನಾವಣೆ ಎದುರಿಸಲು ಸಿದ್ದರಾಗಿದ್ದು, ಎಲ್ಲಾ ರೀತಿಯ ಮಾನದಂಡಗಳನ್ನು ಅನುಸರಿಸಿ, ಮೂರು ಹಂತಗಳಲ್ಲಿ ಚರ್ಚಸಿದ ನಂತರ ಹೈಕಮಾಂಡ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ ಎಂದು ತಿಳಿಸಿದರು.
ಇಲ್ಲಿವರೆಗೆ ಯಾವುದೇ ಸಚಿವರಿಗೆ ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಯಾಗಬೇಕೆಂದು ಹೈಕಮಾಂಡ್ ಹೇಳಿಲ್ಲ. ಅಭ್ಯರ್ಥಿಗಳ ಆಯ್ಕೆಗಾಗಿ ಮೊದಲು ಅರ್ಜಿ ಕರೆಯಲಾಗುತ್ತದೆ. ಚುನಾವಣೆಗೆ ಸ್ಪಧರ್ಿಸಲು ಇಚ್ಛಿಸುವರು ಅರ್ಜಿ ಸಲ್ಲಿಸಬೇಕು. ಅರ್ಜಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ ಎಂದು ತಿಳಿಸಿದರು
ರಾಹುಲ್ ಜಾರಕಿಹೊಳಿ, ಮೃನಾಲ್ ಹೆಬ್ಬಾಳಕರ್ ಎಲ್ಲಿಯೂ ಲೋಕಸಭೆಗೆ ಸ್ಪರ್ಧೆ ಮಾಡುತ್ತೇನೆಂದು ಹೇಳಿಲ್ಲ ಎಂದು ಪ್ರಶ್ನೆಗೆ ಉತ್ತರಿಸಿದರು.
