ವಿಪ್ರ‌ ಮಹಿಳಾ ಸಮಾವೇಶಕ್ಜೆ ಭರ್ಜರಿ ಸಿದ್ಧತೆ

ಬೆಂಗಳೂರು. ಜನೇವರಿ 6 ಮತ್ತು 7 ರಂದು ಎರಡು ದಿನಗಳ ಕಾಲ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ನಡೆಯಲಿರುವ ಮಹಿಳಾ ಸಮಾವೇಶದ ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಸಚಿವೆ ಶ್ರೀಮತಿ ನಿರ್ವಲಾ ಸೀತಾರಾಮನ್ ಅವರನ್ನು ಆಹ್ವಾನಿಸಲಾಯಿತು.

ಮಹಿಳಾ ಸಮಾವೇಶದ ಉದ್ಘಾಟನಾ ಕಾರ್ಯಕ್ರಮಕ್ಕೆ ಬರುವುದಾಗಿ ಶ್ರೀಮತಿ ನಿರ್ಮಲಾ ಸೀತಾರಾಮನ್ ರವರು ತಿಳಿಸಿದರು.
ಅಖಿಲ‌ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ನೇತೃತ್ವದಲ್ಲಿ ಅವರಿಗೆ ಆಹ್ವಾನ ನೀಡಲಾಯಿತು. ಅದಕ್ಕೆ ಅವರು ಸಂತೋಷದಿಂದ ಒಪ್ಪಿಕೊಂಡರು.


ಈ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪ್ರತಿಷ್ಠಾಪನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೆಡೆ ರಾಮ ಜಪ ಮತ್ತು ರಾಮ ತಾರಕ ಹೋಮವನ್ನು ಆಯೋಜನೆ ಮಾಡಿರುವುದನ್ನು ತಿಳಿದು ಸಂತೋಷ ವ್ಯಕ್ತಪಡಿಸಿದರು.
ಮಹಾಸಭಾ ಸಂಘಟನಾ ಕಾರ್ಯದರ್ಶಿ ಅರುಣ್ ಹಿರಿಯಣ್ಣ ಮತ್ತು ಶ್ರೀಮತಿ ಶಕುಂತಲಾ ಅಯ್ಯರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!