ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾರೀ ಭದ್ರತಾ ಲೋಪ ಸಂಭವಿಸಿದೆ. ಲೋಕಸಭೆ ಕಲಾಪ ನಡೆಯುತ್ತಿದ್ದ ವೇಳೆ ಯುವಕನೊಬ್ಬ ವೀಕ್ಷಕರು ಕೂರುವ ಗ್ಯಾಲರಿಯಿಂದ ಸದನದೊಳಗೆ ಜಿಗಿದಿದ್ದಾನೆ.

ಇದರಿಂದ ಕಲಾಪಕ್ಕೆ ಅಡ್ಡಿಯಾಯಿತು. ಕೂಡಲೇ ಆ ಆತನನ್ನು ವಶಕ್ಕೆ ಪಡೆಯಲಾಗಿದೆ. ಹೀಗಾಗಿ ಕಲಾಪವನ್ನು ಮುಂದೂಡಲಾಗಿದೆ.

ದಿಢೀರ್ ಗ್ಯಾಲರಿಯಿಂದ ಜಿಗಿದ ಯುವಕನೊಬ್ಬ ಕಲರ್ ಬಾಂಬ್ವೊಂದನ್ನು ಸ್ಪ್ರೇ ಮಾಡಿದ್ದಾನೆ. ಆಗ ಸದನದಲ್ಲಿದ್ದ ಸಚಿವರು, ಸಂಸದರು ಆತಂಕದಿಂದ ಹೊರ ಬಂದಿದ್ದಾರೆ. ಇದೇ ವೇಳೆ ಹೊರಗಿನ ಗೇಟ್ ಬಳಿಯೂ ವ್ಯಕ್ತಿಯೊಬ್ಬ ಇದೇ ರೀತಿ ಬಣ್ಣವನ್ನು ಸ್ಪ್ರೇ ಮಾಡಿದ್ದಾನೆ.
ಸಂಸತ್ ಭವನದ ಮೇಲಿನ ದಾಳಿಯ ವರ್ಷಾಚರಣೆಯಂದೇ ಈ ಭದ್ರತಾ ಲೋಪ ಆಗಿದೆ.