ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆ..!

ನವದೆಹಲಿ:

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಯನ್ನ ಮರು ಸೇರ್ಪಡೆಯಾಗಿದ್ದಾರೆ.
ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜಗದೀಶ್ ಶೆಟ್ಟರ್ ಅವರು ದೆಹಲಿಯಲ್ಲಿನ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಮಾತುಕತೆ ವೇಳೆ​ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಶೆಟ್ಟರ್‌ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಹೀಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶೆಟ್ಟರ್ ಯಾವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕು. ಮತ್ತೊಂದು ಮೂಲಗಳ ಪ್ರಕಾರ ಶೆಟ್ಟರ್ ಅವರನ್ನು ರಾಜ್ಯಪಾಲರನ್ನಾಗಿ ನೇಮಿಸುವ ಸಾಧ್ಯತೆಗಳಿವೆ.

Leave a Reply

Your email address will not be published. Required fields are marked *

error: Content is protected !!