ನವದೆಹಲಿ
ರಾಜ್ಯಸಭೆಯ 56 ಸ್ಥಾನಗಳಿಗೆ ಚುನಾವಣೆ ಘೋಷಣೆ!
15 ರಾಜ್ಯಗಳ ರಾಜ್ಯಸಭೆಯ 56 ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದೆ.

56 ಸದಸ್ಯರ ಅಧಿಕಾರಾವಧಿಯು ಏಪ್ರಿಲ್ ನಲ್ಲಿ ಮುಕ್ತಾಯಗೊಳ್ಳಲಿದ್ದು, ಕರ್ನಾಟಕದಲ್ಲಿ 4 ಸ್ಥಾನ ಸೇರಿದಂತೆ ಒಟ್ಟು 15 ರಾಜ್ಯಗಳಲ್ಲಿ ಈ ಚುನಾವಣೆ ನಡೆಯಲಿದೆ ಎಂದು ಅದು ತಿಳಿಸಿದೆ.