ದಿಢೀರ್ ರಾಜೀನಾಮೆ ನೀಡಿದ ರಾಜ್ಯಪಾಲರು
ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರು ಇಂದು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.
ವೈಯಕ್ತಿಕ ಕಾರಣಗಳು ಮತ್ತು ಇತರೆ ಕಾರಣಗಳಿಂದ ಪದವಿ ತೊರೆಯುತ್ತಿದ್ದೇನೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

ದಯಮಾಡಿ ನನ್ನ ರಾಜೀನಾಮೆ ಪತ್ರವನ್ನು ಸ್ವೀಕರಿಸಿ, ಅಂಗೀಕರಿಸಬೇಕೆಂದು ರಾಷ್ಟ್ರಪತಿ ದೌಪದಿ ಮುರ್ಮು ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದೇ ವೇಳೆ ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿ ಸ್ಥಾನದಿಂದಲೂ ತಮ್ಮನ್ನು ಬಿಡುಗಡೆ ಮಾಡಿ ಎಂದು ಕೋರಿದ್ದಾರೆ.
