ಬೆಳಗಾವಿ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಮಟ್ಟದ ಕಾರ್ಯಕಾರಿಣಿ ಸಭೆ ಮೊದಲ ಬಾರಿಗೆ ಇದೇ ದಿ. 24 ರಂದು ಗಡಿಭಾಗ ಬೆಳಗಾವಿಯಲ್ಲಿ ನಡೆಯಲಿದೆ.

ಬೆಳಗಾವಿಯ ಕನ್ನಡ ಭವನದಲ್ಲಿಈ ಸಭೆ ನಡೆಯಲಿದೆ
ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ. ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಸಂಬಂಧಿಸಿದಂತೆ ಹೋರಾಟ ನಡೆಸಿದ ಕೀರ್ತಿ ಗೌಡರಿಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಆದೇಶ ಮಾಡಿತು. ಅಷ್ಟೇ ಅಲ್ಲ ಕನ್ನಡ ಅನುಷ್ಠಾನಕ್ಕಾಗಿ ಜೈಲಿಗೆ ಸಹ ಹೋಗಿದ್ದರು.
ಈ ಹಿನ್ನೆಲೆಯಲ್ಲಿ ನಡೆಯುವ ರಾಜ್ಯಮಟ್ಟದ ಕಾರ್ಯಕಾರಿಣಿ ಸಭೆ ಮಹತ್ವ ಪಡೆದುಕೊಂಡಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರೊಂದಿಗೆ ಪೂರ್ವಸಿದ್ಧತೆ ಸಭೆ ನಡೆಸಿದರು.