ಬೆಂಗಳೂರು. ಬೆಳಗಾವಿ ಜಿಲ್ಲೆಯ ಎರಡೂ ಲೋಕಸಭೆ ಕ್ಷೇತ್ರಕ್ಕೆ ತಲಾ ಇಬ್ಬರ ಹೆಸರುಗಳನ್ನು ಹೈಕಮಾಂಡಗೆ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿದೆ.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಉಪಸ್ಥಿತಿ ಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ.

ಬೆಳಗಾವಿ ಕ್ಷೇತ್ರಕ್ಕೆ ಮೃನಾಲ್ ಹೆಬ್ಬಾಳಕರ ಮತ್ತು ಡಾ. ಗಿರೀಶ ಸೋನವಾಲ್ಕರ ಹೆಸರನ್ಬು ಕಳಿಸಲು ನಿರ್ಧರಿಸಲಾಯಿತು.

ಚಿಕ್ಕೋಡಿ ಲೋಕಸಭೆ ಕ್ಷೇತ್ರಕ್ಕೆ ಪ್ರಿಯಾಂಕಾ ಜಾರಕಿಹೊಳಿ ಮತ್ತು ಲಕ್ಷ್ಮಣರಾವ್ ಚಿಂಗಳೆ ಹೆಸರನ್ಬು ಕಳಿಸಲು ತೀರ್ಮಾನಿಸಲಾಯಿತು ಎಂದು ಗೊತ್ತಾಗಿದೆ. ಇದೇ ದಿ. 27 ರ ನಂತರ ಮತ್ತೊಂದು ಸುತ್ತಿನ ಸಭೆ ನಡೆಸಲು ಉಭಯ ಸಚಿವರು ತೀರ್ಮಾನಿಸಿದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜಬಹಟ್ಟಿಹೊಳಿ, ಪ್ರಕಾಶ ಹುಕ್ಕೇರಿ ಸೇರಿದಂತೆ ಪಕ್ಷದ ಶಾಸಕರು, ಟಿಕೆಟ್ ಆಕಾಂಕ್ಷಿಗಳು ಹಾಜರಿದ್ದರು.