ಬೆಂಗಳೂರು.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಪಕ್ಷೇತರ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಕಾರಣವಾಗಿದ್ದ ಮಾಜಿ ಶಾಸಕ ವಿಶ್ವನಾಥ ಪಾಟೀಲರು ಮತ್ತೇ ಬಿಜೆಪಿ ಸೇರಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿ ಅಧಿಕೃತ ಅಭ್ಯರ್ಥಿ ಜಗದೀಶ ಮೆಟಗುಡ್ ಸೋಲಿಗೆ ಕಾರಣವಾಗಿದ್ದವರು ಡಾ. ವಿಶ್ವನಾಥ ಪಾಟೀಲರು.
ಈಗ ಅವರೇ ವಿಜಯೇಂದ್ರ ಪಕ್ಷದ ಅಧ್ಯಕ್ಷರಾದ ನಂತರ ಡಾ.ವಿಶ್ವನಾಥ ಪಾಟೀಲರಿಗೆ ಬಿಜೆಪಿ ಮೇಲೆ ಪ್ರೀತಿ ಜಾಸ್ತಿ ಆಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಮತ್ತೇ ಪಕ್ಷಕ್ಕೆ ವಾಪಸ್ಸಾಗಿದ್ದಾರೆ.