“ಚಿಕ್ಕೋಡಿ:
ಮಾಜಿ ಸಂಸದ, ಬಿಜೆಪಿ ನಾಯಕ ರಮೇಶ್ ಕತ್ತಿ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇವೆ. ರಮೇಶ್ ಕತ್ತಿ ಪಕ್ಷಕ್ಕೆ ಬರುವ ಕುರಿತು ಕಾರ್ಯಕರ್ತರ ಸಭೆ ಮಾಡುತ್ತಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.

ಚಿಕ್ಕೋಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕ ಲಕ್ಷ್ಮಣ್ ಸವದಿ, ಎಂಎಲ್ ಸಿ ಪ್ರಕಾಶ್ ಹುಕ್ಕೇರಿ ಸೇರಿದಂತೆ ಚಿಕ್ಕೋಡಿ ಭಾಗದ ನಾಯಕರ ಅಭಿಪ್ರಾಯ ಪಡೆಯಲು ಸಭೆ ನಡೆಸುತ್ತಿದ್ದೇವೆ.

ರಮೇಶ್ ಕತ್ತಿ ಜೊತೆಗೆ ನಮ್ಮದು ಯಾವುದೇ ಮಾತುಕತೆ ಆಗಿಲ್ಲ. ರಮೇಶ್ ಕತ್ತಿ ಅಥವಾ ಯಾರೇ ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇವೆ. ನಮ್ಮ ನಡೆ ಗೆಲ್ಲುವ ಕಡೆ ಇದೆ ಗೆಲ್ಲುವ ಕಡೆಗೆ ನಮ್ಮ ಒಲುವು ಇದೆ ಎಂದು ತಿಳಿಸಿದರು.
ಇನ್ನು ಪುತ್ರಿ ಪ್ರಿಯಾಂಕಾ ಸ್ಪರ್ಧೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ, ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧೆ ಇದುವರೆಗೂ ಪೈನಲ್ ಆಗಿಲ್ಲ. ಚಿಕ್ಕೋಡಿ ವ್ಯಾಪ್ತಿಯ ಕಾರ್ಯಕರ್ತರ ಒಪ್ಪಿಗೆ ಬಳಿಕ ಅಂತಿಮ ನಿರ್ಧಾರ ಮಾಡಲಾಗುವುದು. ಒಂದು ವೇಳೆ ರಾಜ್ಯ ಮತ್ತು ಹೈಕಮಾಂಡ್ ನಾಯಕರು ತೀರ್ಮಾನ ಮಾಡಿದ ಬಳಿಕ ಚುನಾವಣೆಗೆ ಸ್ಪರ್ಧೆ ಮಾಡಲೇಬೇಕಾಗುತ್ತದೆ. ಆದರೂ ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.