ಬೆಳಗಾವಿ:
ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಅವಳನ್ನು ಜಿಹಾದಿ ಮನಸ್ಥಿತಿಯ ಫಯಾಜ್ ಎಂಬಾತ ಭೀಕರ ಹತ್ಯೆ ಮಾಡಿರುವುದನ್ನು ಖಂಡಿಸಿ ಶುಕ್ರವಾರ ಎಬಿವಿಪಿ ಕಾರ್ಯಕರ್ತರು ಇಲ್ಲಿನ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಶಾಲಾ, ಕಾಲೇಜುಗಳು ಜ್ಞಾನದ ದೇಗುಲಗಳು. ಇಂತಹ ದೇಗುಲದಲ್ಲಿ ಹಾಡಹಗಲೇ ವಿದ್ಯಾರ್ಥಿನಿ ನೇಹಾಳನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದೆ. ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.

ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿಧ್ಯಾರ್ಥಿನಿ ನೇಹಾ ಅವಳನ್ನು ಲವ್ ಜಿಹಾದಿ ಕ್ರೂರ ಮನಸ್ಥಿತಿಯ ಫಯಾಜ್ ಲವ್ ಜಿಹಾದಿಗಾಗಿಯೇ ಅವಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ, ಅವನ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಕಾಲೇಜಿಗೆ ಅಕ್ರಮವಾಗಿ ಬಂದು ಚಾಕುವಿನಿಂದ 9 ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ ಎಂದು ದೂರಿದರು.
ರೋಹಿತ್ ಅಲಕುಂಟೆ, ಪ್ರಶಾಂತ ಶೆಲ್ಲಿಕೆರಿ, ರೋಹಿತ್ ಉಮನಾಬಾದಿಮಠ, ಸಚಿನ ಹಿರೇಮಠ, ಅಮೂಲ್ಯ ಗೌಡರ, ಪ್ರಜ್ವಲ್ ಅಣ್ಣಿಗೇರಿ, ಮಲ್ಲಿಕಾರ್ಜುನ ಪೂಜಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.