ಬೆಳಗಾವಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಕೊಲೆ ಅತ್ಯಂತ ಖಂಡನೀಯ ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ನೇಹಾ ಎಂಬ ಅಮಾಯಕ ವಿದ್ಯಾರ್ಥಿನಿಯನ್ನು ಅಮಾನುಷವಾಗಿ ಕಗ್ಗೊಲೆಗೈದಿರುವುದು ನೀಚ ಕೃತ್ಯವಾಗಿದೆ. ಇಂಥ ಘಟನೆಗಳು ಮತ್ತೆ ರಾಜ್ಯದಲ್ಲಿ ಮರುಕಳಿಸಬಾರದು. ಮೃತಳ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಅವರ ಕುಟುಂಬಕ್ಕೆ ಆ ದೇವರು ದುಖ: ಬರಿಸುವ ಶಕ್ತಿ ಬರಿಸಲಿ ಎಂದು ತಿಳಿದ್ದಾರೆ.