Headlines

ಅಂಜಲಿಗೆ ನ್ಯಾಯ‌ ಕೊಡಿಸಿ

ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಕೋಳಿ, ಬೆಸ್ತ್ ಅಂಬಿಗೇರ ಸಮಾಜದಿಂದ ಬೃಹತ್ ಪ್ರತಿಭಟನೆ

ಆರೋಪಿಗೆ ಕಠಿಣ ಶಿಕ್ಷೆ ನೀಡಲು ಆಗ್ರಹ

ಬೆಳಗಾವಿ: ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹ..ತ್ಯೆ ಆರೋಪಿಗೆ ಗಲ್ಲು ‌ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಶುಕ್ರವಾರ ಬೆಳಗಾವಿ ಜಿಲ್ಲಾ ಕೋಳಿ ಬೆಸ್ತ್ ಸಮಾಜ ಸಂಘದ ವತಿಯಿಂದ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಚೆನ್ನಮ್ಮ ಸರ್ಕಲ್ ನಲ್ಲಿ ಕೆಲಹೊತ್ತು ಪ್ರತಿಭಟನೆ ನಡೆಸಿದ ನಂತರ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು.
ಅಂಜಲಿ ಹಂತಕ ಕೊಲೆ ಬೆದರಿಕೆ ಹಾಕಿದ್ದು, ಈ ಬಗ್ಗೆ ಪೊಲೀಸರಿಗೆ ಮೌಖಿಕ ದೂರು ನೀಡಿದರೂ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ್ದರಿಂದ ಅಂಜಲಿ ಹತ್ಯೆ ನಡೆದಿದೆ. ನೇಹಾ ಹಿರೇಮಠ ಹತ್ಯೆ ಸಂದರ್ಭದಲ್ಲೇ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದರೆ ಇಂತಹ ಘಟನೆಗಳು ಮರು ಕಳಿಸುತ್ತಿರಲಿಲ್ಲ ಎಂದು ಆರೋಪಿಸಿದರು.


ನೇಹಾ ಹಾಗೂ ಅಂಜಲಿ ಹಂತಕರನ್ನು ಗಲ್ಲಿಗೇರಿಸಿ, ಎನ್‌ಕೌಂಟರ್‌ ಮಾಡಿ. ಸಾಧ್ಯವಾಗದಿದ್ದರೆ ನಮ್ಮ ಕೈಗೆ ಅವರನ್ನು ಕೊಟ್ಟು ಬಿಡಿ ನಾವು ನೋಡಿಕೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ ಸಾಬಣ್ಣ ತಳವಾರ ಈ ವೇಳೆ‌ ಮಾತನಾಡಿ. ಅಂಜಲಿ ಅಂಬಿಗೇರ್ ಕೊಲೆ ಖಂಡಿಸಿ ಬೆಳಗಾವಿ ನಗರದಲ್ಲಿ ಕೋಳಿ ಬೆಸ್ತ ಸಮುದಾಯ ಪ್ರತಿಭಟನೆ
ಮಾಡಲಾಗುತ್ತಿದೆ. ಇಡೀ ಜಿಲ್ಲೆಯ ಸಮುದಾಯ ಬಾವಂಧವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಇದು ಎರಡನೇ ಘಟನೆ ಆಗಿದೆ. ಈಗಲೂ ಕೂಡಾ ವಿದ್ಯಾರ್ಥಿನಿ ಮೇಲೆ ಹಲ್ಲೆ‌ಮಾಡಿ ಕೊಲೆ ಮಾಡಿದೆ. ಯಾವುದೋ ಕಾರಣ ಇಟ್ಟುಕೊಂಡ ಕೊಲೆ ಮಾಡಿದ್ದಾನೆ.

ನೇಹಾ ಕೊಲೆ ಮಾಸುವ ಮುನ್ನವೇ ಈಗ ಮತ್ತೊಂದು ಕೊಲೆ ಆಗಿದೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಅಂಜಲಿ ಕೊಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು. ಮೃತ ಅಂಜಲಿ ಕುಟುಂಬದ ಸದಸ್ಯರಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಮಾಜಿ ಉಪ ಮಹಾಪೌರರು ಹಾಗೂ ಸಂಘದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಧುಶ್ರೀ ಪೂಜಾರಿ ಮಾತನಾಡಿ, ಅಂಜಲಿ ಅಂಬಿಗೇರ ಕೊಲೆ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ನೇಹಾ ಕೊಲೆ ಇನ್ನೂ ಮರೆತ್ತಿಲ್ಲ ಈಗಾ ಮತ್ತೊಂದು ಕೊಲೆಯಾಗಿದೆ. ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರ ಇದರ ಬಗ್ಗೆ ಗಮನ ಸರಿಸಬೇಕು. ಮಹಿಳೆಯರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.
ಕೋಳಿ ಬೆಸ್ತ ಸಮಾಜದ ಜಿಲ್ಲಾಧ್ಯಕ್ಷ ದಿಲೀಪ ಕುರದಂವಾಡೆ, ಪ್ರಧಾನ ಕಾರ್ಯದರ್ಶಿ ಸಂಜಯ್ ಪಾಟೀಲ್, ನಗರ ಅಧ್ಯಕ್ಷ ಸಿದ್ದಗೌಡಾ ಸುಣಗಾರ, ಯುವ ಅಧ್ಯಕ್ಷ ಅಪ್ಪಯ್ಯ ರಾಮರಾವ್, ತಾಲೂಕು ಅಧ್ಯಕ್ಷೆ ಗೀತಾ ಕೋಳಿ, ಹುಕ್ಕೇರಿ ತಾಲೂಕಾಧ್ಯಕ್ಷ ಅಶೋಕ್ ಶಿರಗೆ, ಲಕ್ಷ್ಮಣ ಯಮಕನಮರಡಿ, ಕಾಶಪ್ಪ ಕೋಳಿ, ಹಿರಿಯರಾದ ಮಲ್ಲಪ್ಪ ಮುರಗೋಡ, ಸಾಗರ ಕೋಳಿ, ರವಿ ಪೂಜಾರ, ವಿಎಚ್ ಪಿ ಮುಖಂಡರಾದ ಕೃಷ್ಣ ಭಟ್, ವಿಜಯ ಜಾಧವ್, ಅಪ್ಪಾಸಾಹೇಬ ಪೂಜಾರ, ರಮೆಶ ಧರೆನ್ನವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಎಬಿವಿಪಿ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು‌.

Leave a Reply

Your email address will not be published. Required fields are marked *

error: Content is protected !!