ದಲಿತರ ಹಣ ನುಂಗಿದ ಕಾಂಗ್ರೆಸ್?. ಸಚಿವ ನಾಗೇಂದ್ರ ರಾಜೀನಾಮೆ ಕೊಡಲಿ. ಜೂನ್ ೬ ಕ್ಕೆ ಗಡುವು. ಬಿಜೆಪಿಯಿಂದ ರಾಜ್ಯವ್ಯಾಪಿ ಹೋರಾಟ.
ಬೆಳಗಾವಿ.
ದಲಿತರ ಹಣವನ್ನು ಕಾಂಗ್ರೆಸ್ ಸಕರ್ಾರ ಲೂಟಿ ಮಾಡಿದ ಆರೋಪ ಹೊತ್ತ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಬಿಜೆಪಿ ಹೋರಾಟ ಮಾಡಲಿದೆ ಎಂದು ಶಾಸಕ ಅಭಯ ಪಾಟೀಲ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರ ಕಲ್ಯಾಣದ ಬಗ್ಗೆ ಬರರೀ ಭಾಷಣ ಮಾಡುವ ಕಾಂಗ್ರೆಸ್ ಮುಂದಾಳುಗಳು ಪರಿಶಿಷ್ಠ ಜಾತಿ ಮತ್ತು ಪಂಗಡಗಳ ಹೆಸರಿನಲ್ಲಿ ನಡೆಯುತ್ತಿರುವ ದುರಾಚಾರ ಹಾಗೂ ಭ್ರಷ್ಟಾಚಾರದ ನೇತೃತ್ವವನ್ನು ಇಲಾಖೆಯ ಸಚಿವರೇ ವಹಿಸಿರುವುದು ದುರಂತ ಎಂದರು,.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ ನಾಗೇಂದ್ರ ರಾಜೀನಾಮೆ ನೀಡದೆ ಇದ್ದರೆ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಅಧಿಕಾರಿಯ ಸಾವಿನ ತನಿಖೆಯನ್ನು ಪಾರದರ್ಶಕವಾಗಿ ನಡೆಸಬೇಕೆಂದು ಶಾಸಕರು ಆಗ್ರಹಿಸಿದರು.
ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ಪ್ರಧಾನ ಕಾರ್ಯದಶರ್ಿ ಈರಯ್ಯಾ ಖೋತ ಹಣಮಂತ ಕೊಂಗಾಲಿ ಮತ್ತಿತರರು ಇದ್ದರು.