ಕಡಿಮೆ ಅವಧಿಯಲ್ಲಿ ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದು ಖುಷಿ ತಂದಿದೆ: ಸಂಸದೆ ಪ್ರಿಯಂಕಾ ಜಾರಕಿಹೊಳಿ
ಗೋಕಾಕ: ಬಹಳ ಕಡಿಮೆ ಅವಧಿಯಲ್ಲಿಯೇ ನಾವು ಚುನಾವಣೆ ಎದುರಿಸಿ ಚಿಕ್ಕೋಡಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು ಖುಷಿ ತಂದಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಕಡಿಮೆ ಅವಧಿಯಲ್ಲೇ ಅಬ್ಬರದ ಪ್ರಚಾರ ಕೈಗೊಂಡಿದ್ದು ಗೆಲುವಿಗೆ ಸಹಕಾರಿಯಾಗಿದೆ. ನನ್ನ ಗೆಲುವಿಗೆ ಪಕ್ಷದ ಕಾರ್ಯಕರ್ತರು, ಮುಂಚೂಣಿ ಘಟಕದ ಮುಖಂಡರು, ಶಾಸಕರು ಸಾಥ್ ನೀಡಿದರು. ಇನ್ನು ತಂದೆ, ಸಚಿವರಾದ ಸತೀಶ್ ಜಾರಕಿಹೊಳಿಯವರು, ಸಹೋದರ ರಾಹುಲ್ ಕೂಡ ನನ್ನ ಗೆಲುವಿಗೆ ಕಾರಣಿಕರ್ತರಾಗಿದ್ದಾರೆಂದು ತಿಳಿಸಿದರು.

ಇನ್ನು ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಜನರು ತಮ್ಮ ಸಮಸ್ಯೆಗಳನ್ನು ಈಡೇರಿಸಲು ಮನವಿ ಸಲ್ಲಿಸಿದರು, ಅದರಂತೆ ಜನತೆಯ ಸಮಸ್ಯೆಗಳನ್ನು ನಿವಾರಿಸಲು ಪ್ರಾಮಾಣಿವಾಗಿ ಸ್ಪಂದಿಸುತ್ತೇನೆ. ಚಿಕ್ಕ ವಯಸ್ಸಿನಲ್ಲಿ ಸಂಸತ್ ಪ್ರವೇಶಿಸಿಸುತ್ತಿರುವು ಬಹಳಷ್ಟು ಖುಷಿಯಾಗಿದೆ ಎಂದರು.