ಬೂಡಾ ಹಗರಣ- ಐಎಎಸ್ ಅಧಿಕಾರಿಗಳಿಂದ ತನಿಖೆ
ಬೆಳಗಾವಿ.
ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಗರಣದ ಬಗ್ಗೆ ಬೆಂಗಳೂರಿನ ಹಿರಿಯ ಐಎಎಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು,
ನಗರದ ಬೂಡಾ ಕಚೇರಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಚಚರ್ೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ತನಿಖೆ ಪೂರ್ಣಗೊಂಡ ಬಳಿಕ ವರದಿ ಆಧರಿಸಿ ಕ್ರಮವಾಗುತ್ತದೆ. ತನಿಖೆಯಲ್ಲಿ ಯಾವುದೇ ವಿಳಂಬವಾಗುತ್ತಿಲ್ಲ.. ಸುದೀರ್ಘ ತನಿಖೆಯಾಗಬೇಕಾದರೆ ಸಮಯ ಬೇಕಾಗುತ್ತದೆ ಎಂದು ಅವರು ಹೇಳಿದರು.
ಭೂ ಸ್ವಾಧೀನಕ್ಕೂ ಮುನ್ನ ಟೆಂಡರ್ ಕರೆಯುವುದು ತಪ್ಪು. ಇಂತಹ ತಪ್ಪುಗಳು ಸಾಕಷ್ಟು ನಡೆದಿವೆ. ಬೆಳಗಾವಿ ರಿಂಗ್ ರೋಡ್ ಕಾಮಗಾರಿಯಲ್ಲಿಯೂ ಇದೇ ರೀತಿಯ ತಪ್ಪು ಆಗಿತ್ತು. ಆದರೆ ಈಗ ಸಮಸ್ಯೆ ಸರಿಪಡಿಸಿದ್ದು, ಬೆಳಗಾವಿ ರಿಂಗ್ ರೋಡ್ ಕಾಮಗಾರಿ ಆರಂಭವಾಗಿದೆ ಎಂದು ತಿಳಿಸಿದರು.
ಅಕ್ರಮ ಬಡಾವಣೆಗಳಿಗೆ ಕುಡಿಯುವ ನೀರು, ವಿದ್ಯುತ್ ಸಂಪರ್ಕ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಅಕ್ರಮ ಇರಲಿ, ಅಧಿಕೃತ ಇರಲಿ, ಬಡಾವಣೆಗಳಿದ್ದರೆ ಕುಡಿಯುವ ನೀರು, ವಿದ್ಯುತ್ ಸಂಪರ್ಕ ನೀಡಬೇಕೆಂಬ ನಿದರ್ೇಶನವಿದೆ. ಹೀಗಾಗಿ ಅಕ್ರಮ ಬಡಾವಣೆಗಳಿದ್ದರೂ ಸೌಲಭ್ಯಗಳನ್ನು ನೀಡಬೇಜಾಗುತ್ತದೆ ಎಂದು ಸಚಿವರು ಹೇಳಿದರು