ಮಾಧ್ಯಮ ವರದಿ ಗಮನಿಸಿ ಬಂದ ಆಯೋಗ ಮಾಧ್ಯಮವನ್ನೇ ದೂರವಿಟ್ಡು ಸಭೆ ಮಾಡಿತು.
ಉದ್ದೇಶಪೂರ್ವಕವಾಗಿಯೇ ಮಾಧ್ಯಮವನ್ಬು ದೂರವಿಡುವ ಕೆಲಸವನ್ನು ಮಾಡಲಾಯಿತಾ?.
ಈ ವಿಷಯದಲ್ಲಿ ಮಾಧ್ಯಮಗಳನ್ಬು ದೂರವಿಟ್ಟಿದ್ದು ಏಕೆ?
ಮಾನವ ಹಕ್ಕುಗಳು ಆಯೋಗದ ಸಭೆ; ಮೃತ ಕಾರ್ಮಿಕನ ದೇಹದ ಅವಶೇಷಗಳು ಗೌರವಪೂರ್ವಕ ಹಸ್ತಾಂತರ: ಅಧಿಕಾರಿಗಳ ಸ್ಪಷ್ಟನೆ
ನಾವಗೆ ಅಗ್ನಿ ದುರಂತ: ಸ್ಪಷ್ಟ ವರದಿ ಸಲ್ಲಿಸಲು ಎಸ್.ಕೆ.ವಂಟಿಗೋಡಿ ಸೂಚನೆ
ಬೆಳಗಾವಿ, :
ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಯ ಅಗ್ನಿ ದುರಂತದಲ್ಲಿ ಮೃತಪಟ್ಟ ಕಾರ್ಮಿಕನ ದೇಹದ ಅವಶೇಷಗಳನ್ನು ಗೌರವಪೂರ್ವಕವಾಗಿ ಹಸ್ತಾಂತರಿಸಿಲ್ಲ ಎಂದು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯನ್ನು ಆಧರಿಸಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ.ವಂಟಿಗೋಡಿ ಹೇಳಿದರು.
ಆದರೆ ಇಂತಹ ಮಹತ್ವದ ಸಭೆಗೆ ಅದೇ ಮಾಧ್ಯಮಗಳನ್ನು ದೂರವಿಟ್ಟು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಈಗ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಆದರೆ ಜಿಲ್ಲಾಡಳಿತ ಮಾತ್ರ ಗೌರವಪೂರ್ವಕವಾಗಿ ಹಸ್ತಾಂತರಿಸಿರುವ ಕುರಿತು ಆಯೋಗಕ್ಕೆ ಸ್ಪಷ್ಟನೆ ನೀಡಿದೆ., ಈ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಸೂಚನೆ ನೀಡಿದರು.
ಅಗ್ನಿ ದುರಂತ ನಡೆದಿದ್ದ ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಆ.19) ನಡೆದ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಯ ಅಗ್ನಿ ದುರಂತದ ಪ್ರಕರಣದ ಕುರಿತು ಪತ್ರಿಕೆಗಳಲ್ಲಿ ಸಾಕಷ್ಟು ಭಿನ್ನವಾದ ಅಭಿಪ್ರಾಯಗಳು ಪ್ರಕಟವಾಗಿವೆ. ಈ ನಿಟ್ಟಿನಲ್ಲಿ ಮಾನವ ಹಕ್ಕುಗಳ ಆಯೋಗದದಿಂದ ನಿಖರವಾದ ವರದಿಯನ್ನು ಆಧರಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರದೆ ಸ್ಪಷ್ಟ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.
ಸ್ಪಷ್ಟ ತನಿಖಾ ವರದಿ ಸಲ್ಲಿಸಲು ಸೂಚನೆ:

ಅಗ್ನಿ ದುರಂತದ ಕುರಿತು ಸ್ಪಷ್ಟ ತನಿಖಾ ಕಾರ್ಯ ಕೈಗೊಳ್ಳಬೇಕು. ಇಂತಹ ಪ್ರಕರಣಗಳು ಸಂಭವಿಸಿದಲ್ಲಿ ತಾಲ್ಲೂಕು ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ನೇರ ಹೊಣೆಯಾಗಿತ್ತಾರೆ. ಹಾಗಾಗಿ ಮೃತ ದೇಹವನ್ನು ಕುಟುಂಬಗಳಿಗೆ ಗೌರವಪೂರ್ವಕವಾಗಿ ಹಸ್ತಾಂತರಿಸಬೇಕು. ಮಾನವ ಹಕ್ಕುಗಳು ಉಲ್ಲಂಗಣೆಯಾಗದಂತೆ ನೋಡಿಕೊಂಡು ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರವಣ ನಾಯಕ, ಬೆಳಗಾವಿ ತಹಶೀಲ್ದಾರ್ ಬಸವರಾಜ ನಾಗರಾಳ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಸೂರ್ಯನಾರಾಯಣ ಭಟ್, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಅಗ್ನಿಶಾಮಕ ದಳದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

.