ದ್ವೇಷ ರಾಜಕಾರಣದ ಅಗತ್ಯ ನಮಗಿಲ್ಲ: ಶಾಸಕ ವಿನಯ ಕುಲಕರ್ಣಿ
ಬೆಳಗಾವಿ: ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್ ಸರ್ಕಾರ ಯಾವುದೇ ದ್ವೇಷ ರಾಜಕಾರಣ ಮಾಡಿಲ್ಲ. ಅದರ ಅವಶ್ಯಕತೆಯೂ ನಮಗಿಲ್ಲ ಎಂದು ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ಸ್ಪಷ್ಟಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಮುನಿರತ್ನ ಅವರು ಮಾತನಾಡಿದ್ದು ತಪ್ಪು. ದೊಡ್ಡ ಸಮುದಾಯದ ಬಗ್ಗೆ ಆ ರೀತಿ ಮಾತನಾಡಬಾರದಿತ್ತು. ಅವರ ಹೇಳಿಕೆ ಹಿನ್ನೆಲೆಯಲ್ಲಿ ಅವರ ಬಂಧನವಾಗಿದ್ದು, ಇದರಲ್ಲಿ ದ್ವೇಷದ ಎಲ್ಲಿದೆ. ಇನ್ನು, ದ್ವೇಷದ ರಾಜಕಾರಣ ಮಾಡುವರು ಯಾರು ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ ಎಂದು ಹೇಳಿದರು.
2ಎ ಮೀಸಲಾತಿ ಹೋರಾಟ ನಿರಂತರ….
ಪಂಚಮಸಾಲಿ 2ಎ ಮೀಸಲಾತಿ ಹೋರಾಟ ನಿರಂತರವಾಗಿ ನಡೆಯುತ್ತೀದೆ. ವಾರದೊಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸ್ವಾಮೀಜಿಗಳನ್ನು ಭೇಟಿ ಮಾಡಿಸಿ 2 ಎ ಮೀಸಲಾತಿ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ವಿನಯ ಕುಲಕರ್ಣಿ ಹೇಳಿದರು.
ಹಿಂದಿನ ಸರ್ಕಾರ ಮುಸ್ಲಿಂ ಸಮುದಾಯದ 2ಬಿ ವರ್ಗವನ್ನು ತೆಗದು 2ಡಿ ಮೀಸಲಾತಿ ಕೊಟ್ಟಿತ್ತು. ಅದನ್ನು ನಾವು ವಿರೋಧಿಸಿದ್ದೇವೆ. ಈ ಪ್ರಕರಣ ಈಗ ನ್ಯಾಯಾಲಯದಲ್ಲಿದೆ. ಅಧಿವೇಶನ ಸಮಯದಲ್ಲಿ ಪಂಚಮಸಾಲಿ ಮೀಸಲಾತಿ ಬಗ್ಗೆ ಮಾತನಾಡಲು ಅವಕಾಶವೇ ಸಿಗಲಿಲ್ಲ . ಬರೀ ಮುಡಾ, ವಾಲ್ಮೀಕಿ ವಿವಾದದಲ್ಲಿ ಅಧಿವೇಶನ ಮುಗಿದು ಹೋಯಿತು ಎಂದು ಬೇಸರ ವ್ಯಕ್ತಪಡಿಸಿದರು.