ಪಂಚಮಸಾಲಿ ವಕೀಲರ ರಾಜ್ಯ ಮಟ್ಟದ ಸಭೆ: 3 ನಿರ್ಣಯ ಅಂಗೀಕಾರ

ಪಂಚಮಸಾಲಿ ವಕೀಲರ ರಾಜ್ಯ ಮಟ್ಟದ ಸಭೆ:
3 ನಿರ್ಣಯ ಅಂಗೀಕಾರ:


ಬೆಳಗಾವಿ:
ಲಿಂಗಾಯತ ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಒತ್ತಾಯಿಸುವ ನಿಟ್ಟಿನಲ್ಲಿ ನಗರದಲ್ಲಿ ರವಿವಾರ ನಡೆದ ಲಿಂಗಾಯತ ಪಂಚಮಸಾಲಿ ವಕೀಲರ ರಾಜ್ಯ ಮಟ್ಟದ ಸಮಾವೇಶದಲ್ಲಿ ಮೂರು ಮಹತ್ವದ ನಿರ್ಣಯಗಳನ್ನು ಅಂಗೀಕರಿಸಲಾಗಿದೆ.
ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ವಕೀಲರ ಪರಿಷತ್, ನ್ಯಾಯಪೀಠ ಕೂಡಲಸಂಗಮ ಹಾಗೂ ಬೆಳಗಾವಿ ಜಿಲ್ಲಾ ಘಟಕದ ಸಹಯೋಗದಲ್ಲಿ ನಡೆದ ಈ ಸಮಾವೇಶದಲ್ಲಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ನಿರ್ಣಯ ಮಂಡಿಸಿದರು.
ಹಿಂದುಳಿದ ವರ್ಗಗಳ ಆಯೋಗದಿಂದ ಪೂರ್ಣ ಪ್ರಮಾಣದ ವರದಿ ಪಡೆದು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು. ಲಿಂಗಾಯತ ಒಳಪಂಗಡಗಳಿಗೆ ಕೇಂದ್ರ ಸರಕಾರದಿಂದ ದೊರೆಯುವ ಓಬಿಸಿ ಮೀಸಲಾತಿ ಸೌಲಭ್ಯ ನೀಡುವಂತೆ ರಾಜ್ಯ ಸಕರ್ಾರ ಕೂಡಲೇ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು. ಅ.15ರಂದು ನಡೆಯುವ ಸಭೆಯಲ್ಲಿ ಮುಖ್ಯಮಂತ್ರಿಗಳು 2ಎ ಮೀಸಲಾತಿ ವಿಷಯದಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.


ಅ.15ರಂದು ನಡೆಯುವ ಸಭೆಯಲ್ಲಿ ಮೀಸಲಾತಿ ಕುರಿತು ಮುಖ್ಯಮಂತ್ರಿಗಳು ನಿರ್ಣಯ ಕೈಗೊಳ್ಳದಿದ್ದರೆ, ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ವಕೀಲರು ರೈತರ ಟ್ರ್ಯಾಕ್ಟರ್ ರ್ಯಾಲಿ ಮೂಲಕ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಮಾವೇಶದಲ್ಲಿ ಬೆಳಗಾವಿ, ಧಾರವಾಡ, ಮೈಸೂರು, ದಾವಣಗೆರೆ, ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ವಕೀಲರು ಭಾಗವಹಿಸಿದ್ದರು

Leave a Reply

Your email address will not be published. Required fields are marked *

error: Content is protected !!