ಖಾಯಂಗೆ ಒತ್ತಾಯಿಸಿ ಪೌರ ಕಾರ್ಮಿಕರ ಪ್ರತಿಭಟನೆ
ಬೆಳಗಾವಿ:
ಇಲ್ಲಿನ ಮಹಾನಗರ ಪಾಲಿಕೆಯಲ್ಲಿರುವ 100 ಪೌರ ಕಾರ್ಮಿಕರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಪೌರ ಕಾರ್ಮಿಕರು ಸೋಮವಾರ ಬೆಳಿಗ್ಗೆ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು.
ಪೌರ ಕಾರ್ಮಿಕರ ದಿನಾಚರಣೆಯಂದೇ ಕೈಗೆ ಕಪ್ಪುಪಟ್ಟಿ ಕಟ್ಟಿಕೊಂಡು ಪಾಲಿಕೆಗೆ ಮುತ್ತಿಗೆ ಹಾಕಿದ ಪೌರಕಾರ್ಮಿಕರು ಹಾಕಿ ದಿಢೀರ್ ಪ್ರತಿಭಟನೆ ನಡೆಸಿದರು.
ಹಲವು ಬಾರಿ ಮನವಿ ಅರ್ಪಿಸಿದರೂ ಕೂಡ ಪಾಲಿಕೆಯಲ್ಲಿನ ನೂರಕ್ಕೂ ಹೆಚ್ಚು ಪೌರಕಾರ್ಮಿಕರನ್ನು ಖಾಯಂಗೊಳಿಸುತ್ತಿಲ್ಲ. ಈ ಬಗ್ಗೆ ಸರ್ಕಾರ ಖಾಯಂಗೊಳಿಸಬೇಕೆಂದು ಆದೇಶ ನೀಡಿದರೂ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಆದೇಶ ಮಾಡಿದರೂ ಪಾಲಿಕೆ ಅಧಿಕಾರಿಗಳು ನೇಮಕ ಮಾಡಿಕೊಂಡಿಲ್ಲ. ಇದರಿಂದ ಪೌರಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ. ತಕ್ಷಣ ಪಾಲಿಕೆ ಅಧಿಕಾರಿಗಳು ನೋಟಿಸ್ ಬೋರ್ಡ ಮೇಲೆ ನೇಮಕ ಪಟ್ಟಿ ಹಚ್ಚುವಂತೆ ಆಗ್ರಹಿಸಿದರು.
ಸರ್ಕಾರ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದ ಪೌರಕಾರ್ಮಿಕರು, ಸರ್ಕಾರ ಕೂಡಲೇ ಕ್ರಮ ಕೈಗೊಂಡು ನಮ್ಮ ನ್ಯಾಯಯುತ ಬೇಡಿಕೆಗೆ ಸ್ಪಂದಿಸಬೇಕೆಂದು