ಅತ್ಯಾಚಾರ ಆರೋಪಿಗೆ 20 ವರ್ಷ ಶಿಕ್ಷೆ

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸುಗಿದ ಆರೋಪಿತನಿಗೆ 20 ವರ್ಷಗಳ ಕಠಿಣ ಶಿಕ್ಷೆ (ಜಿಲ್ಲಾ ಪೋಕ್ಸೊ ನ್ಯಾಯಾಲಯ ತೀರ್ಪು ನೀಡಿದೆ.

ಬೆಳಗಾವಿ. ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜಿಲ್ಲಾ ಪೋಕ್ಸೊ ನ್ಯಾಯಾಲಯವು 20 ವರ್ಷ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಹನುಮಂತ ಪುಂಡಲಿಂಕ ಚಿಪ್ಪಲಕಟ್ಟಿ( 21)ವರ್ಷ ಸಾಃ ಬಸರಗಿ ಗವಟಿನ ತಾಃ ಸವದತ್ತಿ ಶಿಕ್ಷೆ ಗೆ ಒಳಗಾದ ಆರೋಪಿ.

ಈತನು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು 2019ರ ನವೆಂಬರ್ ೭ ರಂದು ಅತ್ಯಾಚಾರ ಮಾಡುವ ಉದ್ದೇಶದಿಂದ ಅಪಹರಣ ಮಾಡಿಕೊಡು ಗೋನಗನೂರ ಗ್ರಾಮದ ದೊಡ್ಡಗುಡ್ಡದಲ್ಲಿ ಕರೆದುಕೊಂಡು ಹೋಗಿದ್ದನು.

ಈ ಕುರಿತಂತೆ ದೂರು ದಾಖಲು ಮಾಡಿಕೊಂಡ
ಅಂದಿನ ತನಿಖಾಧಿಕಾರಿ ಎಮ್ ಐ ನಡುವಿನಮನಿ ರವರು ಹೆಚ್ಚುವರಿ ಜಿಲ್ಲಾ & ಸತ್ರ ನ್ಯಾಯಾಲಯ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯಕ್ಕೆ ದೋಷಾರೋಪಣಿ ಪಟ್ಟಿಯನ್ನು ಸಲ್ಲಿಸಿದ್ದರು. ನ್ಯಾಯಾಧೀಶರಾದ ಶ್ರೀಮತಿ ಸಿ ಎಮ ಪುಷ್ಪಲತಾ ಇವರು ಪ್ರಕರಣವನ್ನು ವಿಚಾರಣೆ ಮಾಡಿ, ಒಟ್ಟು 20 ಸಾಕ್ಷಿಗಳ ವಿಚಾರಣೆ ಮೇಲಿಂದ ಹಾಗೂ ದಾಖಲೆಗಳು ಮುದ್ದೆಮಾಲಗಳ ಆಧಾರದ ಮೇಲಿಂದ ಆರೋಪಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ & ರೂ 10.000 ರೂಪಾಯಿ ದಂಡ ವಿದಿಸಿ ತೀರ್ಪು ನೀಡಿದ್ದಾರೆ.
ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ರೂ ಒಂದು ಲಕ್ಷ ಪರಿಹಾರ ಧನವನ್ನು ಪಡೆಯಲು ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣದಲ್ಲಿ ಸರಕಾರದ ಪರವಾಗಿ ಎಲ್. ವಿ ಪಾಟೀಲ, ವಿಶೇಷ ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!