ಹಿರೇಬಾಗೇವಾಡಿಯಲ್ಲಿ ಗಾಂಧಿ ನಡಿಗೆ ಕಾರ್ಯಕ್ರಮ
ಬೆಳಗಾವಿಯಲ್ಲಿ ಏಐಸಿಸಿ ಅಧಿವೇಶನದ ಚಿಂತನೆ
ಬೆಳಗಾವಿ.
ಗಡಿನಾಡ ಳಗಾವಿಯಲ್ಲಿ ಎಐಸಿಸಿ ಅಧಿವೇಶನ ನಡೆಸುವ ಕುರಿತೂ ಚಿಂತನೆ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು,
ಹಿರೇಬಾಗೇವಾಡಿಯಲ್ಲಿ ಬುಧವಾರ ಗಾಂಧಿ ನಡಿಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಎಐಸಿಸಿ ಅಧಿವೇಶನದ ಶತಮಾನೋತ್ಸವ ನಿಮಿತ್ತ ಇಡೀ ವರ್ಷ ಕಾರ್ಯಕ್ರಮಗಳನ್ನು ನಡೆಸಲು ಸರಕಾರ ಮತ್ತು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ ಎಂದು ಅವರು ತಿಳಿಸಿದರು,
ಬ್ರಿಟೀಶರ್ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚನ್ನಮ್ಮನ ವಿಜಯೋತ್ಸವದ 200ನೇ ವರ್ಷ ಕೂಡ ಆಗಿರುವುದರಿಂದ ಮುಂದಿನ ದಿನಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಮಹಾತ್ಮಾ ಗಾಂಧೀಜಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನದ 100ನೇ ವರ್ಷದ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುತ್ತಿರುವ ನಾವೆಲ್ಲರೂ ಪುಣ್ಯವಂತರು. ಮುಂದಿನ ಒಂದು ವರ್ಷಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಈಗಿನ ಪೀಳಿಗೆಗೆ ಹಿರಿಯರ ಆದರ್ಶಗಳನ್ನು ತಿಳಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.
—.
ಹತ್ತು ಹಲವು ಯೋಜನೆಗಳು

ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಆಯ್ಕೆಯಾಗಿರುವ ಲಕ್ಷ್ಮೀ ಹೆಬ್ಬಾಳಕರ್ ಅವರು ಸಚಿವೆಯಾಗಿ ರಾಜ್ಯದ ಉದ್ದಗಲಕ್ಕೂ ಮೆಚ್ಚುವಂತಹ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರಕ್ಕೆ ಹಲವಾರು ಶಾಶ್ವತವಾದ ಯೋಜನೆಗಳನ್ನು ತಂದಿದ್ದಾರೆಂದರು,.
ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಮಾತನಾಡಿದರು, ಇದೇ ವೇಳೆ, ಬೆಂಗಳೂರಿನಲ್ಲಿ ನಡೆಯುತ್ತಿದ್ದ ಮುಖ್ಯ ಕಾರ್ಯಕ್ರಮವನ್ನು ಝೂಮ್ ಮೂಲಕ ಸಂಪಕರ್ಿಸಿ ಸ್ವಚ್ಛತೆಯ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.
ಹಿರೇಬಾಗೇವಾಡಿ ಚಾವಡಿಕೂಟದ ಲಕ್ಷ್ಮೀ ದೇವಿ ಗುಡಿಯಿಂದ ಫಡಿಬಸವೇಶ್ವರ ದೇವಸ್ಥಾನದವರೆಗೆ ಗಾಂಧಿ ನಡಿಗೆ ಜಾಥಾ ನಡೆಸಲಾಯಿತು. ಜಾಥಾದಲ್ಲಿ ಭಾಗವಹಿಸಿದವರೆಲ್ಲ ಗಾಂಧೀಜಿಯವರ ಸಂದೇಶಗಳನ್ನು ಸಾರುವ ಫಲಕಗಳನ್ನು ಹಿಡಿದಿದ್ದರು.
ಸುನಿತಾ ಪಾಟೀಲ್, ರಾಜಾ ಸಲೀಂ, ಸುರೇಶ ಇಟಗಿ, ಶಂಕರಗೌಡ ಪಾಟೀಲ್, ಬಸವರಾಜ ಮ್ಯಾಗೋಟಿ, ಅಡಿವೇಶ ಇಟಗಿ, ಶ್ರೀಕಾಂತ್ ಮಧುಬರಮಣ್ಣವರ್ ಮೊದಲಾದವರು ಮಾತನಾಡಿದರು. ಸಿ.ಸಿ.ಪಾಟೀಲ್, ಮನೋಹರ ಬಾಂಡಗಿ ಮೊದಲಾದವರು ಇದ್ದರು