CONGRESS MLA ವಿರುದ್ಧ ಅತ್ಯಾಚಾರ ಕೇಸ್..!?

ಬೆಂಗಳೂರು : ರೈತ ಮುಖಂಡೆಯ ಮೇಲೆ ಅತ್ಯಾಚಾರ ಮಾಡಿದ ಆರೋಪ ಈಗ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಮೇಲೆ ಬಂದಿದ್ದು FIR ಕೂಡ ದಾಖಲಾಗಿದೆ.

ಆದರೆ ಈ ಆರೋಪವನ್ನು ತಳ್ಳಿಹಾಕಿರುವ ಶಾಸಕ‌ವಿನಯ ಕುಲಕರ್ಣಿ ಅದೇ ಠಾಣೆಯಲ್ಲಿ ಪ್ರತಿ ದೂರು ಸಲ್ಲಿಸಿದ್ದಾರೆ.

ಈಗ ಸಂತ್ರಸ್ತೆ ಮಹಿಳೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
. ಶಾಸಕ ವಿನಯ್ ಕುಲಕರ್ಣಿ ಅವರು 2022 ರಿಂದ ನನಗೆ ಪರಿಚಯ. ಆಗಾಗ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ಬಳಸಿಕೊಳ್ಳುತ್ತಿದ್ದರು. ವಿಡಿಯೋ ಕಾಲ್‌ನಲ್ಲಿ ಸಂಪೂರ್ಣ ಬೆತ್ತಲೆಯಾಗಿ ನನ್ನನ್ನು ನೋಡು ಎನ್ನುತ್ತಿದ್ದರು. 2022ರ ಆಗಸ್ಟ್‌ 24 ರಂದು ಸಂಜೆ 4 ಗಂಟೆಗೆ ಆಟೋದಲ್ಲಿ ಅವರ ಮನೆಗೆ ಹೋಗಿದ್ದೆ ಎಂದು ದೂರಿನಲ್ಲಿ‌ವಿವರಿಸಿದ್ದಾರೆ.

, ದೇವನಹಳ್ಳಿ ಸಮೀಪದ ಐವಿಸಿ ರೋಡ್‌ ಬಳಿಯ ನಿರ್ಜನ ಪ್ರದೇಶಕ್ಕೆ ಕಾರಿನಲ್ಲಿ ಕರೆದುಕೊಂಡು ಹೋದ ವಿನಯ. ಕತ್ತಲೆ ಆದ ನಂತರ ಹಿಂದಿನ ಸೀಟ್‌ನಲ್ಲಿ ನನ್ನ ಹತ್ತಿರ ಕುಳಿತು ಅಸಭ್ಯ ವರ್ತನೆ ತೋರಿದ್ದಲ್ಲದೆ, ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ.ಬಳಿಕ ಅಕ್ಟೋಬರ್‌ 2 ರಂದು ಗಾಂಧಿ ಜಯಂತಿಯಂದೂ ತಮ್ಮ ಮೇಲೆ ಮತ್ತೊಮ್ಮೆ ಅತ್ಯಾಚಾರ ಮಾಡಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈಗ ಸಂಜಯ್ ನಗರ ಪೊಲೀಸ್ ಠಾಣೆಯ ಪೊಲೀಸರು ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ, ಕಿರುಕಿಳ, ಜೀವ ಬೆದರಿಕೆ, , ವಂಚನೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಐಪಸಿ ಸೆಕ್ಷನ್‌ 506 , 504, ,201, 366, 376, 323, 354 354, , ಹಾಗೂ IT ಆಕ್ಟ್ ನಡಿ ಪ್ರಕರಣ ದಾಖಲಾಗಿದೆ. ಸದ್ಯ ದೂರು ನೀಡಿದ ಮಹಿಳೆಯನ್ನು ವೈದ್ಯಕೀಯ ತಪಾಸಣೆಗಾಗಿ ಕೆ ಸಿ ಜನರಲ್ ಆಸ್ಪತ್ರೆಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!