ಡಿಸಿಗೆ ಸೂಚನೆ ನೀಡಿದ ಸಚಿವ ಸತೀಶ ಅಧಿವೇಶನಕ್ಕೂ ಮುನ್ನ ಸಮಸ್ಯೆಗಳ ಬಗ್ಗೆ ಚರ್ಚೆ ಬೆಳಗಾವಿ. ಡಿಸೆಂಬರನಲ್ಲಿ ನಡೆಯುವ ಅಧಿವೇಶನಕ್ಕೂ ಮುನ್ನ ಸಮಸ್ಯೆಗಳ ಬಗ್ಗೆಯೇ ಸಂಬಂಧಿಸಿದವರೊಂದಿಗೆ ಸಭೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರತಿ ಬಾರಿ ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನಾಕಾರರು ತಮ್ಮ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬರುತ್ತಾರೆ, ಸಂಬಂಧಿಸಿದ ಸಚಿವರಿಂದಲೇ ಉತ್ತರ ಪಡೆಯಬೇಕೆಂಬುದು ಅವರ ಉದ್ದೇಶವಾಗಿರುತ್ತದೆ, ಆದರೆ ಈ ಬಾರಿ ಅಧಿವೇಶನ ಸುಸೂತ್ರ ನಡೆಯಬೇಕು ಎನ್ನುವ ಉದ್ದೇಶದಿಂದ ಸಮಸ್ಯೆಗಳ ಪರಿಹಾರ ಸಂಬಂಧಪಟ್ಟಂತೆ ಸಂಬಂಧಿಸಿದವರೊಂದಿಗೆ ಮುಂಚಿತವಾಗಿಯೇ ಚರ್ಚೆ ನಡೆಸಲಾಗುತ್ತದೆ ಎಂದರು,
ಅಧಿವೇಶನ ಸಂಬಂಧ ಜಿಲ್ಲಾಡಳಿತ ಎಲ್ಲ ಸಿದ್ಧತೆಗಳನ್ನು ಮಾಡುತ್ತಿದೆ. ಈ ಹಿಂದಿನ ಅನುಭವ ಇರುವುದರಿಂದ ಅಧಿವೇಶನದ ಸಿದ್ಧತೆಗಳಿಗೆ ಜಿಲ್ಲಾಡಳಿತಕ್ಕೆ ಯಾವುದೇ ತೊಂದರೆ ಎದುರಾಗಲ್ಲ ಎಂದು ಹೇಳಿದರು. ಮಹಾತ್ಮಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ನೂರು ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ಕಾಂಗ್ರೆಸ್ ಅಧಿವೇಶನದ ಸ್ಮರಣಾರ್ಥ ಕಾರ್ಯಕ್ರಮ ಆಯೋಜಿಸಲಾಗುವುದು. ಇದಕ್ಕಾಗಿ ಈಗಾಗಲೇ ರಾಜ್ಯ ಸರಕಾರ 2 ಕೋಟಿ ಅನುದಾನ ಕಾಯ್ದಿರಿಸಿದೆ. ಇನ್ನು ಹೆಚ್ಚಿನ ಅನುದಾವನ್ನು ಕೂಡ ನೀಡಲಿದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಅಧಿವೇಶನದ ಕಾರ್ಯಕ್ರಮದ ರೂಪರೇಷೆ ನಿರ್ಧರಿಸುವ ನಿಟ್ಟಿನಲ್ಲಿ ಎಚ್.ಕೆ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಇದೇ ದಿ . 5 ಕ್ಕೆ ಸಭೆ ನಡೆಯಲಿದೆ. ಅಲ್ಲದೇ, ಕಾಂಗ್ರೆಸ್ ಪಕ್ಷದ ವತಿಯಿಂದಲೂ ಪ್ರತ್ಯೇಕವಾಗಿ ಸಭೆ ನಡೆಯಲಿದೆ ಎಂದರು.
ಪಾಲಿಕೆಯಲ್ಲಿ ಹಸ್ತಕ್ಷೇಪವಿಲ್ಲ
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿದೆ. ಪಾಲಿಕೆಯಲ್ಲಿ ಹಸ್ತಕ್ಷೇಪ ಮಾಡುವ ಅಧಿಕಾರ ನಮಗೆ ಇಲ್ಲ. ಹಾಗಾಗಿ, ನಾವು ಏನೂ ಮಾಡಲಾಗದು ಎಂದು ಸಚಿವ ಜಾರಕಿಹೊಳಿ ಹೇಳಿದರು, ಪಾಲಿಕೆಗೆ ನೂತನ ಆಯುಕ್ತರು ಬಂದಿದ್ದಾರೆ, ಅವರು ಚನ್ನಾಗಿ ಕೆಲಸ ಮಾಡುತ್ತಾರೆ, ಅವರಿಗೆ ನಮ್ಮ ಸಹಕಾರವೂ ಇರುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದರು,