ZP,TPಗೆ ಕಮಲ ಪಡೆ ರೆಡಿ

ಸಂಘಟನಾ ಪರ್ವ ಜಿಲ್ಲಾ ಮಟ್ಟದ ಕಾರ್ಯಾಗಾರ
ಜಿ.ಪಂ., ತಾ.ಪಂ. ಚುನಾವಣೆಗೆ ಸಿದ್ಧರಾಗಿ : ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ


ಬೆಳಗಾವಿ

: ಮುಂಬರುವ ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಬೇಕು ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಭಾಷ್ ಪಾಟೀಲ ಕರೆ ನೀಡಿದರು.
ನಗರದ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾ ಕಾರ್ಯಾಲಯದಲ್ಲಿ ಸೋಮವಾರ ಜರುಗಿದ ಸಂಘಟನಾ ಪರ್ವ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಕಾರ್ಯಕರ್ತರೇ ಪಕ್ಷದ ನಿಜವಾದ ಆಸ್ತಿ. ಚುನಾವಣೆಗಳಲ್ಲಿ ಬಿಜೆಪಿ ಗೆಲುವಿಗೆ ಕ್ರಿಯಾಶೀಲ ಕಾರ್ಯಕರ್ತರು ಕಾರಣ ಎಂದರು.
ಸಂಘಟನಾ ಪರ್ವ ಯಶಸ್ಸಿಗೆ ಪಕ್ಷದ ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ಕೆಲಸ ಮಾಡಬೇಕು. ಸಂಘಟನೆಯ ವಿವಿಧ ಹಂತಗಳನ್ನು ಬೂತ್ ಮಟ್ಟದಿಂದಲೇ ಪಕ್ಷದ ಸಂವಿಧಾನ ಮತ್ತು ಆಶಯದಂತೆ ಗಟ್ಟಿಗೊಳಿಸುವಲ್ಲಿ ಪ್ರಮುಖರು ಕಾರ್ಯ ಪ್ರವೃತ್ತರಾಗಬೇಕು ಎಂದು ಹೇಳಿದರು.


ಗುಳೇದಗುಡ್ಡ ಕ್ಷೇತ್ರದ ಮಾಜಿ ಶಾಸಕ ರಾಜಶೇಖರ ಶೀಲವಂತರ ಮಾತನಾಡಿ, ಮಹಿಳೆಯರು ಹಾಗೂ ಯುವಕರು ಬಿಜೆಪಿಯ ಸಕ್ರೀಯ ಸದಸ್ಯರಾಗಿ ನೋಂದಣಿಯಾಗುವ ಮೂಲಕ ದೇಶವನ್ನು ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈಯನ್ನು ಬಲಪಡಿಸಬೇಕು. ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಶೇ.33ರಷ್ಟು ಅವಕಾಶವನ್ನು ಕಲ್ಪಿಸುತ್ತಿರುವ ಆಶಯಕ್ಕೆ ಪೂರಕವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸದಸ್ಯರಾಗಿ ಮುಖ್ಯ ವಾಹಿನಿಯಲ್ಲಿ ಕ್ರಿಯಾಶೀಲವಾಗಿ ಗುರುತಿಸಿಕೊಳ್ಳಬೇಕು ಎಂದು ಹೇಳಿದರು.
ಓ.ಬಿ.ಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ ಅವರು ಸಂಘಟನಾ ಪರ್ವದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಸೋನಾಲಿ ಸರ್ನೋಬತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ದೇಶಪಾಂಡೆ, ಮಲ್ಲಿಕಾರ್ಜುನ್ ಮಾದಮ್ಮನವರ, ಸಂತೋಷ ದೇಶನೂರ, ಸಚಿನ್ ಕಡಿ, ಯಲ್ಲೇಶ್ ಕೊಲಕಾರ, ರಾಜೇಂದ್ರ ಗೌಡಪ್ಪಗೋಳ,ಭೀಮಶಿ ಭರಮಣ್ಣವರ, ಯುವರಾಜ ಜಾಧವ,ಕೆ.ವಿ.ಪಾಟೀಲ, ಶ್ರೀಕರ ಕುಲಕರ್ಣಿ, ಬಸವರಾಜ್ ಸಾಣಿಕೊಪ್ಪ, ಮಹಾಂತೇಶ ಚಿನ್ನಪ್ಪಗೌಡ್ರ, ರಾಜೇಶ್ವರಿ ಒಡೆಯರ್, ವಿಠ್ಠಲ ಸಾಯಣ್ಣವರ, ಮನೋಜ್ ಪಾಟೀಲ್ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!