ಬೆಳಗಾವಿವರೆಗೆ ವಂದೇ ಭಾರತ ರೈಲು ..!

ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ ಶೆಟ್ಟರ ಅವರು ಕೇಂದ್ರ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಅವರ ಉಪಸ್ಥಿತಿಯಲ್ಲಿ ನೈರುತ್ಯ ವಲಯದ ರೈಲ್ವೆ ಪ್ರಧಾನ ವ್ಯವಸ್ಥಾಪಕರಾದ ( ಜಿ.ಎಮ್ ) ಅರವಿಂದ ಶ್ರೀನಿವಾಸ್ ಅವರನ್ನು ಭೇಟಿ ಮಾಡಿ, ಬೆಳಗಾವಿಗೆ ಸಂಬಂಧಿಸಿದಂತೆ ರೈಲು ಸೇವೆ ಒದಗಿಸುವ ಬಗ್ಗೆ ಸುದೀರ್ಘವಾದ ಚರ್ಚೆ ನಡೆಸಿದರು.

೧) ಬೆಂಗಳೂರು – ಧಾರವಾಡ ವಂದೇ ಭಾರತ್ ಎಕ್ಸ್ ಪ್ರೆಸ್:
ಪ್ರಸ್ತಾಪಿತ ರೈಲು ಸಂಚಾರವನ್ನು ಬೆಳಗಾವಿವರೆಗೆ ವಿಸ್ತರಿಸುವುದು ಬಹಳ ಅವಶ್ಯವಿದ್ದು ಮತ್ತು ಬೆಳಗಾವಿ ಜಿಲ್ಲೆಯ ಸಾರ್ವಜನಿಕರ ಬೇಡಿಕೆಯೂ ಸಹ ಆಗಿದೆ. ಆದಕಾರಣ ಈ ರೈಲಿನ ಪ್ರವಾಸದ ಅಲ್ಪ ಸಮಯ ಬದಲಾವಣೆಯೊಂದಿಗೆ ಇದು ಸಾಧ್ಯವಿದ್ದು ಪ್ರಯುಕ್ತ ಈ ವಿಷಯವನ್ನು ಗಂಭೀರವಾಗಿ ಅವಲೋಕಿಸಿ ಕ್ರಮವನ್ನು ಜರುಗಿಸಲು ರೈಲ್ವೆ ಮಹಾಪ್ರಬಂಧಕರಿಗೆ ತಿಳಿಸಲಾಯಿತು.

೨) ಬೆಳಗಾವಿ ಮಿರಜ್ ನಡುವೆ ದಿನನಿತ್ಯ ಸಂಚರಿಸುವ ರೈಲು:
ಈ ರೈಲು ಸೇವೆಯನ್ನು ಪ್ರತಿ ಮಾಹೆ ಮುಂದುವರಿಸುತ್ತಾ ಬಂದಿದ್ದು, ಇದರ ಸೇವೆಯನ್ನು ಖಾಯಂ ಮಾಡುವಂತೆಯೂ ಮತ್ತು ಇದನ್ನು “ಮೆಮು”ರೈಲನ್ನಾಗಿ ಪರಿವರ್ತಿಸುವ ಬಗ್ಗೆ ಕ್ರಮವನ್ನು ಜರುಗಿಸಲು ಸೂಚಿಸಲಾಯಿತು.

೩) ಲೋಕಾಪುರ – ರಾಮದುರ್ಗ – ಸವದತ್ತಿ – ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣ :
ಪ್ರಸ್ತಾಪಿತ ರೈಲು ಮಾರ್ಗ ನಿರ್ಮಾಣ ಅವಶ್ಯಕತೆ ಇದ್ದು, ಈ ಕುರಿತು ಮುಂಚಿತ ಸಮೀಕ್ಷೆ ನಡೆಸುವುದು ಅವಶ್ಯಕ. ಈ ನಿಟ್ಟಿನಲ್ಲಿ ಕೂಡಲೇ ಮುಂದಿನ ಅಗತ್ಯ ಕ್ರಮವನ್ನು ಜರುಗಿಸಲು ಸೂಚಿಸಿ, ರೈಲ್ವೆ ಪ್ರಧಾನ ವ್ಯವಸ್ಥಾಪಕರಿಗೆ (ಜಿ.ಎಮ್ ) ಅವರಿಗೆ ಮನವಿ ಸಲ್ಲಿಸಿದರು.

ಎಲ್ಲ ಬೇಡಿಕೆಗಳನ್ನು ಅವಲೋಕಿಸಿದ ರೈಲ್ವೆ ಪ್ರಧಾನ ವ್ಯವಸ್ಥಾಪಕರು (ಜಿ.ಎಮ್ ) ಈ ಕುರಿತು ಶೀಘ್ರ ಅನುಕೂಲಕರವಾದ ಕ್ರಮವನ್ನು ಕೈಗೊಳ್ಳುವುದಾಗಿ ಪ್ರಸ್ತಾಪಿಸಿದರೆಂದು ಬೆಳಗಾವಿ ಲೋಕಸಭಾ ಸದಸ್ಯರಾದ ಶ್ರೀ ಜಗದೀಶ ಶೆಟ್ಟರ ಇವರು ತಿಳಿಸಿದರು.

ಈ ಸಭೆಯಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಶ್ರೀ ಅಭಯ ಪಾಟೀಲ ಇವರು ಭಾಗವಹಿಸಿದ್ದಾರೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!