MAYOR- ಸಾಮಾನ್ಯ.. DY MAYOR- ಸಾಮಾನ್ಯ ಮಹಿಳೆ
ಬೆಳಗಾವಿ.
ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯ ಬಿಜೆಪಿ ಮೂರನೇ ಅವಧಿಯ ಮೇಯರ್ ಮತ್ತು ಉಪಮೇಯರ್ ಚುನಾವಣೆ ಬರುವ ದಿ. 21 ರಂದು ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ.

ಈಗಾಗಲೇ ಬೆಳಗಾವಿ ಮಹಾನಗರ ಪಾಲಿಕೆಯಿಂದ ಮೇಯರ್ ಅವಧಿ ಇದೇ ದಿ,14ಕ್ಕೆ ಮುಕ್ತಾಯವಾಗಲಿದ್ದು ಚುನಾವಣೆ ನಡೆಸಬೇಕೆಂದು ಪ್ರಾದೇಶಿಕ ಆಯುಕ್ತರಿಗೆ ಪತ್ರ ರವಾನೆಯಾಗಿತ್ತು.
ಈ ಹಿನ್ನೆಲೆಯಲ್ಲಿ ಬಹುತೇಕ ಇದೇ ಸೋಮವಾರ ಚುನಾವಣೆ ದಿನಾಂಕ ನಿಗದಿ ಮಾಡಿ ಆದೇಶ ಹೊರಡಿಸುವ ಎಲ್ಲ ಸಾಧ್ಯತೆಗಳು ಹೆಚ್ಚಾಗಿವೆ.
ಈ ಬಾರಿ ಮೇಯರ್ ಸಾಮಾನ್ಯ ವರ್ಗಕ್ಕೆ ಮತ್ತು ಉಪ ಮೇಯರ್ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.