
ಕೌಜಲಗಿ ಅಭಿವೃದ್ಧಿಗೆ ಬದ್ಧ- ಬಾಲಚಂದ್ರ
ಗೋಕಾಕ : ಕೌಜಲಗಿಯ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ಸದ್ಬಳಕೆ ಮಾಡಲಾಗುವುದು. ಈ ಮೂಲಕ ಕೌಜಲಗಿ ಗ್ರಾಮಸ್ಥರ ಅಹವಾಲುಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ರವಿವಾರದಂದು ಕೌಜಲಗಿಯ ವಿಠ್ಠಲ-ಬೀರದೇವರ ದೇವಸ್ಥಾನದ ಆವರಣದಲ್ಲಿ ಕೌಜಲಗಿ ಜಿಲ್ಲಾ ಪಂಚಾಯತ ಕ್ಷೇತ್ರದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಭಾಗದಿಂದ ಅತ್ಯಧಿಕ ಮತಗಳ ಮುನ್ನಡೆ ನೀಡಿದ್ದಕ್ಕಾಗಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.ರಸ್ತೆಗಳ ಸುಧಾರಣೆ, ಒಳಚರಂಡಿ ನಿರ್ಮಾಣ, ಕುಡಿಯುವ ನೀರು, ಆಸ್ಪತ್ರೆ…