
ಅಂತಾರಾಷ್ಟೀಯ ಮಟ್ಟದಲ್ಲಿ ಬ್ರಾಹ್ಮಣರಿಗೆ ಗೌರವ
ಬಾಗಲಕೋಟೆ. ವಿದ್ಯಾರ್ಥಿಗಳ ಸಂಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರುವ ನೂತನ ಶಿಕ್ಷಣ ನೀತಿಯನ್ನು ಕೈಬಿಡದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ತಿಳಿಸಿದ್ದಾರೆ.ವಿದ್ಯಾಗಿರಿಯ ವಿಪ್ರ ಅಭಿವೃದ್ಧಿ ಸಂಘದ ಶ್ರೀರಾಯರ ಮಠದ ಆವರಣದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ರೂಪಿಸಿರುವ ರಾಷ್ಟೀಯ ಶಿಕ್ಷಣ ನೀತಿಯಲ್ಲಿ ಕೌಶಲಕ್ಕೆ ಒತ್ತು ನೀಡಲಾಗಿದ್ದು, ವಿದ್ಯಾರ್ಥಿಗಳ ಸರ್ವತೋನ್ಮುಖ…