
ಪ್ರಭಾ ಶುಗರ್ಸಗೆ ಅವಿರೋಧ ಆಯ್ಕೆ
ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾಖರ್ಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಮಣ್ಣಾ ಕೃಷ್ಣಪ್ಪ ಮಹಾರಡ್ಡಿ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಸೋಮವಾರದಂದು ಸಕ್ಕರೆ ಕಾಖರ್ಾನೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಶಾಹೀನ್ ಅಖ್ತರ ಅವರು ಪ್ರಕಟಿಸಿದರು. ಅಧ್ಯಕ್ಷ-ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಅಶೋಕ ಪಾಟೀಲ ಹಾಗೂ ರಾಮಣ್ಣಾ…