Headlines

ಧೈರ್ಯದಿಂದ ಮುನ್ನುಗ್ಗಿ..!

ಬೆಂಗಳೂರು.

ಅಪಾರ ರಾಜಕೀಯ ಜ್ಞಾನವನ್ನು ಹೊಂದಿರುವ ಸಹೋದರಿ ತೇಜಸ್ವಿನಿ ಅನಂತಕುಮಾರ ಅವರು ಧೈರ್ಯ ಮಾಡಿ ರಾಜಕೀಯಕ್ಕೆ ಮುನ್ನುಗ್ಗಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು.

ಬೆಙಗಳೂರಿನಲ್ಲಿ ಇಂದು ನಡೆದ ಅನಂತ ನಮನ-64 ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು.

ನಿಮ್ಮ ಬೆನ್ನಿಗೆ ಸಮಾಜವಿದೆ. ಒಳ್ಳೆಯ ಕೆಲಸ ಮಾಡಿದ್ದೀರಾ. ಹೀಗಾಗಿ ಸಹೋದರಿ ತೇಜಸ್ವಿನಿ ಅವರು ರಾಜಕೀಯಕ್ಕೆ ಬರಬೇಕು ಎಂದರು

ಅನಂತ್ ಕುಮಾರ್ ಅವರ ಜೊತೆಗೆ ಸಂಸಾರ ಮಾಡಿ ನಿಮ್ಮದೇ ಆದ ರಾಜಕೀಯ ಜ್ಞಾನವನ್ನು ಹೊಂದಿದ್ದೀರಿ., ಎಷ್ಟೋ ಹಸುಗಳು ಹುಟ್ಟುತ್ತವೆ, ಆದರೆ ಎಲ್ಲವೂ ಬಸವ ಆಗಲು ಸಾಧ್ಯವಿಲ್ಲ. ನೀವು ಇಲ್ಲೇ ಅಡುಗೆ ಮನೆಯಲ್ಲಿ ಅದಮ್ಯ ಚೇತನದ ಜೊತೆಯಲ್ಲೇ ಇರಬೇಕಾಗುತ್ತದೆ. ನಿಮ್ಮ ಹಿಂದೆ ದೊಡ್ಡ ಪಡೆ ಇದೆ, ಸಮಾಜವಿದೆ. ಮುನ್ನುಗ್ಗಿ, ನಿಮ್ಮನ್ನು ನಂಬಿಕೊಂಡಿರುವ ಹಿಂಬಾಲಕರನ್ನು ರಕ್ಷಣೆ ಮಾಡಿ ಎಂದು ಶಿವಕುಮಾರ ಹೇಳಿದರು.

ಹೊಲವನ್ನ ಉಳುವೆ ಮಾಡದಿದ್ದರೆ ಮಟ್ಟ ಆಗಲ್ಲ, ಶಿಲೆ ಶಿಲ್ಪಿ ಕೈಗೆ ಸಿಗದಿದ್ದರೆ ಕಲೆ ಅರಳುವುದಿಲ್ಲ, ಕಲ್ಲು ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ.

ಈ ಕಾರಣಕ್ಕೆ ನೀವು ರಾಜಕಾರಣದಲ್ಲಿ ಇರಬೇಕು ಎಂದು ಸಲಹೆ ‌ನೀಡುತ್ತಿದ್ದೇನೆಂದರು.

ನಿಮ್ಮ ಇತಿಹಾಸವನ್ನು ಯಾರೂ ಬದಲಾವಣೆ ಮಾಡಲು, ಮುಚ್ಚಿಹಾಕಲು ಆಗುವುದಿಲ್ಲ. ಒಳ್ಳೆ ಕೆಲಸ ಮಾಡಿ ನಿಮ್ಮದೇ ಛಾಪು ಮೂಡಿಸಿಕೊಂಡಿದ್ದೀರಿ. ನಿಮ್ಮ ಜೊತೆ ರಾಜಕೀಯ ಭಿನ್ನಾಭಿಪ್ರಾಯ ಇರಬಹುದು. ಆದರೆ ನಿಮ್ಮ ಬಳಿ ಮೃದು ಹೃದಯವಿದೆ. ಅನಂತ್ ಕುಮಾರ್ ಅವರು ಹೆಜ್ಜೆ ಗುರುತುಗಳನ್ನು ಬಿಟ್ಟು ಹೋಗಿದ್ದಾರೆ, ನೀವು ಹೆಜ್ಜೆ ಗುರುತು ಮೂಡಿಸಿ ಎಂದು ಡಿಕೆಶಿ ಸಲಹೆ ನೀಡಿದರು

ಮೆಟ್ರೊ.ಅನಂತ, ಕೃಷ್ಣರ ಕೊಡುಗೆ

ಬೆಂಗಳೂರಿನ ಮೆಟ್ರೊ ಅನಂತಕುಮಾರ‌ ಮತ್ತು ಎಸಗ.ಎಂ ಕೃಷ್ಣರ ಕೊಡುಗೆ ಎಂದು ಶಿವಕುಮಾರ ಹೇಳಿದರು.

ಪ್ರಧಾನಿ ವಾಜಪೇಯಿ ಅವರನ್ನು ಒಂದೇ ದಿನದಲ್ಲಿ ಭೇಟಿ ಮಾಡಿಸಿ, ನಿಮ್ಮ ಸಮಿತಿಯ ವರದಿ ಸರಿಯಾಗಿದೆ ಎಂದು ಹೇಳಿ, ಕೇಂದ್ರದಿಂದ ಒಪ್ಪಿಗೆ ಕೊಡಿಸಿದರು. ಯಾರು ಏನೇ ಹೇಳಿದರೂ ಬೆಂಗಳೂರು ಮೆಟ್ರೋ ಅನಂತ ಕುಮಾರ್ ಅವರ ಹಾಗೂ ಕೃಷ್ಣ ಅವರ ಕೊಡುಗೆ ಎಂದರು..

ಮಾಜಿ‌ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ‌ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು

ಗುರುವನ್ನು ಸ್ಮರಿಸಿದ ಶಿಷ್ಯ

https://ebelagavi.com/index.php/2023/09/21/a-9/

.

Leave a Reply

Your email address will not be published. Required fields are marked *

error: Content is protected !!