Headlines

ಕಿತ್ತೂರು ಉತ್ಸವಕ್ಕೆ 5 ಕೋಟಿ ಬೇಕು..!

ಬೆಳಗಾವಿ,

ಕಳೆದ ವರ್ಷ ಸರಕಾರವು ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಘೋಷಿಸಿ ಎರಡು ಕೋಟಿ ರೂಪಾಯಿ ಅನುದಾನ ನೀಡಿತ್ತು. ಅದೇ ರೀತಿ ಈ ಬಾರಿ ಐದು ಕೋಟಿ ರೂಪಾಯಿ ಅನುದಾನ ನೀಡುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಲಾಗುವುದು” ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ(ಸೆ.26) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಈ ಬಾರಿ ಐದು ಕೋಟಿ ರೂಪಾಯಿ ಅನುದಾನ ಕೋರಿ ಕಿತ್ತೂರು ಶಾಸಕರಾದ ಬಾಬಾಸಾಹೇಬ್ ಪಾಟೀಲ ಅವರು ಮುಖ್ಯಮಂತ್ರಿ ಹಾಗೂ ಸಚಿವರಿಗೆ ಈಗಾಗಲೇ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.


ಈ ಬಾರಿ ಕೂಡ ಕಿತ್ತೂರಿನಲ್ಲಿ ಒಂದಕ್ಕಿಂತ ಹೆಚ್ಚು ವೇದಿಕೆ ನಿರ್ಮಾಣ ಮಾಡುವುದರ ಜತೆಗೆ ಕಾಕತಿ ಗ್ರಾಮದಲ್ಲಿ ಕೂಡ ವೇದಿಕೆ‌ ನಿರ್ಮಿಸುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.


ಕಳೆದ ಬಾರಿಯಂತೆ ವೀರಜ್ಯೋತಿ ಯಾತ್ರೆಯು ರಾಜ್ಯದಾದ್ಯಂತ ಸಂಚರಿಸಲು ಹಾಗೂ ಪ್ರವಾಸಿತಾಣಗಳಲ್ಲಿ ಕೂಡ ಸಂಚರಿಸುವಂತೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು

.
ಉತ್ಸವವನ್ನು ಪ್ರತಿವರ್ಷದಂತೆ ಅಚ್ಚುಕಟ್ಟಾಗಿ ಆಚರಿಸಲು ಅನುಕೂಲವಾಗುವಂತೆ ವೇದಿಕೆ, ಮೆರವಣಿಗೆ, ಊಟೋಪಾಹಾರ, ವಸ್ತುಪ್ರದರ್ಶನ ಹೀಗೆ ಎಲ್ಲ ಉಪ ಸಮಿತಿಗಳನ್ನು ರಚಿಸಲಾಗುವುದು.
ಸಮಿತಿ ರಚನೆಯಾದ ಕೂಡಲೇ ಸದಸ್ಯರು ಕಾರ್ಯಾರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.


ಕುಸ್ತಿ, ಕ್ರೀಡೆ, ಸಾಂಸ್ಕೃತಿಕ‌ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ವಿವರಿಸಿದರು.

Leave a Reply

Your email address will not be published. Required fields are marked *

error: Content is protected !!