ಬೆಳಗಾವಿ:
ವೀರಶೈವ ಲಿಂಗಾಯತ ಸಮುದಾಯಕ್ಕೆ ಕೇಂದ್ರದ ಒಬಿಸಿ ಮೀಸಲಾತಿ ಹಕ್ಕೊತ್ತಾಯ ಇಂದಿಲ್ಲಿ ನಡೆದ ವೀರಭದ್ರೇಶ್ವರ ಜಯಂತ್ಯುತ್ಸವದಲ್ಲಿ ಮಂಡಿಸಲಾಯಿತು,
ನಗರದ ಕಾಲೇಜು ರಸ್ತೆಯ ಗಾಂಧಿ ಭವನದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಭಾನುವಾರ ವೀರಭದ್ರೇಶ್ವರ ಜಯಂತ್ಯುತ್ಸವ ನಿಮಿತ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು,
ಈ ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಬೇಕು.ಮತ್ತು ಈ ಬೇಡಿಕೆ ಈಡೇರುವವರೆಗೆ ನಾವು ವಿರಮಿಸುವುದಿಲ್ಲ ಎಂಬ ಒಮ್ಮತದ ತೀಮರ್ಾನ ಕೈಗೊಳ್ಳಲಾಯಿತು.
ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆಯಲ್ಲ. ಎರಡೂ ಒಂದೇ ಎಂಬ ಸಂದೇಶವನ್ನೂ ಈ ಸಂದರ್ಭದಲ್ಲಿ ಸಾರಲಾಯಿತು.
ಸಾನ್ನಿಧ್ಯ ವಹಿಸಿದ್ದ ಶ್ರೀಶೈಲ ಪೀಠದ ಡಾ.ಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ವೀರಶೈವ ಲಿಂಗಾಯತ ಅತ್ಯಂತ ಹೀನಾಯ ಸ್ಥಿತಿಗೆ ಬಂದಿದೆ. ಮುಂದಿನ ದಿನಗಳಲ್ಲೂ ಈ ಪರಿಸ್ಥಿತಿ ಬದಲಾಗದಿದ್ದರೆ, ನಮ್ಮ ಸಮಾಜಕ್ಕೆ ಸುರಕ್ಷತೆಯ ದೊಡ್ಡ ಪ್ರಶ್ನೆ ಕಾಡಲಿದೆ. ಹಾಗಾಗಿ ವೀರಭದ್ರನಂತೆ ನಾವು ವೀರರಾಗಿ ಹೋರಾಡದಿದ್ದರೆ, ನಾವು ಅಭದ್ರರಾಗಲಿದ್ದೇವೆ. ಹಾಗಾಗಿ ವೀರರಾಗುವ ಕುರಿತು ಇಂದೇ ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು.

ಗಂಭೀರ ವಿಚಾರ…!
ಈಗಿನ ರಾಜ್ಯ ಸಕರ್ಾರ ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸುತ್ತಿರುವ ಕುರಿತು ವೀರಶೈವ ಲಿಂಗಾಯತ ಸಮುದಾಯದ ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಇತ್ತೀಚೆಗೆ ಹೇಳಿಕೆ ಕೊಟ್ಟಿದ್ದಾರೆ. ಅದು ಗಂಭೀರವಾದ ವಿಚಾರ. ಈ ಕುರಿತು ಸಕರ್ಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶ್ರೀಗಳು ಹೇಳಿದರು. ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಕೊಡಬೇಕು ಎಂದು ಒತ್ತಾಯಿಸಿದರು.
ಶಿರಹಟ್ಟಿಯ ಶ್ರೀ ಜಗದ್ಗುರು ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಬಿ.ಎಸ್.ಯಡಿಯೂರಪ್ಪ, ಜಗದೀಶ ಶೆಟ್ಟರ್, ಲಕ್ಷ್ಮಣ ಸವದಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯದ ಮುಖಂಡರನ್ನು ನಾಶಗೊಳಿಸುವ ಕಾರ್ಯ ನಡೆಯಿತು. ಅದಾಗ್ಯೂ ಸಮಾಜ ಸುಮ್ಮನಿದ್ದದ್ದು ಸರಿಯಲ್ಲ. ವೀರಶೈವ ಲಿಂಗಾಯತ ಮಠಗಳ ಮೇಲೆ ಮತ್ತು ಸ್ವಾಮಿಗಳ ದಾಳೀ ನಡೆದಾಗಲೂ ಸುಮ್ಮನಿದ್ದದ್ದು ಸರಿಯಲ್ಲ. ಸಮಾಜದ ರಾಜಕಾರಣಿಗಳು, ಕಲಾವಿದರು, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿವೃತ್ತ ಪ್ರಾದೇಶಿಕ ಆಯುಕ್ತ ಡಾ.ಎಂ.ಜಿ.ಹಿರೇಮಠ ವಿಷಯ ಮಂಡಿಸಿದರು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮುರಗೋಡದದ ಶ್ರೀಮ.ನಿ.ಪ್ರ ನೀಲಕಂಠ ಮಹಾಸ್ವಾಮೀಜಿ ಸೇರಿದಂತೆ ನಾಡಿನ ಹಲವು ಮಠಾಧೀಶರು ಪಾಲ್ಗೊಂಡಿದ್ದರು.

ವಿಧಾನ ಪರಿಷತ್ ಸದಸ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಸಕ ಮಹಾಂತೇಶ ಕೌಜಲಗಿ, ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ಮಾಜಿ ಶಾಸಕರಾದ ಮಹಾದೇವಪ್ಪ ಯಾದವಾಡ, ಮಹಾಂತೇಶ ದೊಡ್ಡಗೌಡರ, ಡಾ.ವಿ.ಐ.ಪಾಟೀಲ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷೆ ರತ್ನಪ್ರಭಾ ಬೆಲ್ಲದ, ಅಶೋಕ ಪೂಜಾರಿ, ವಿನಯ ನಾವಲಗಟ್ಟಿ, ವಿರೂಪಾಕ್ಷಿ ಮಾಮನಿ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ
ಪ್ರದೀಪ ಕಂಕಣವಾಡಿ, ಸುಭಾಷ ಪಾಟೀಲ, ಇತರರಿದ್ದರು. ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಕಿತ್ತೂರು ಕನರ್ಾಟಕ ಪ್ರದೇಶದ ಅಧ್ಯಕ್ಷ ಉಮೇಶ ಬಾಳಿ ಸ್ವಾಗತಿಸಿದರು. ಇದಕ್ಕೂ ಮುಂಚೆ ರಾಣಿ ಚನ್ನಮ್ಮನ ವೃತ್ತದಿಂದ ಕಾಕತಿವೇಸ್ ಮೂಲಕ ವೀರಭದ್ರೇಶ್ವರ ಮೆರವಣಿಗೆ ಸಂಚರಿಸಿ, ಗಾಂಧಿ ಭವನ ತಲುಪಿತ