ಹೈದರಾಬಾದ್, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತತ್ವಕ್ಕೆ ಬರಕು ಕಾರಷಿಜರ್ತರಾದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುನಾರ ಅವರ ಚಿತ್ತ ಈಗ ತೆಲಂಗಾಣದ ಮೇಲೆ ನೆಟ್ಟಿದೆ.
AICC ಕೂಡ ಡಿ.ಕೆ ಅವರ ಸಾಮರ್ಥ್ಯ ವನ್ನು ಮನಗಂಡು ತೆಲಂಗಾಣದಲ್ಲಿ ನಡೆಯುವ ವಿಧಾನಸಭೆ ಚುನಾವಣೆಯ ಜವಾಬ್ದಾರಿ ಹೊರೆಸಿದೆ ಎಂದು ಹೇಳಲಾಗಿದೆ.

ಇನ್ನೆರಡು ತಿಂಗಳಲ್ಲಿ ತೆಲಂಗಾಣ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಅಲ್ಲಿ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್ ಪಕ್ಷಕ್ಕೆ ಕಾಂಗ್ರೆಸ್‌ನಿಂದ ತೀವ್ರ ಪೈಪೋಟಿ ಎದುರಾಗಿದೆ. ಇದರ ಜೊತೆಗೆ ಕರ್ನಾಟಕದ ವಿಧಾನಸಭೆ ಚುನಾವಣೆ ಫಲಿತಾಂಶ ತೆಲಂಗಾಣದ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ.
.ಈ ಹಿನ್ನೆಲೆಯಲ್ಲಿ ಗೌಪ್ಯ ಕಾರ್ಯತಂತ್ರ ರೂಪಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೈದರಾಬಾದ್‌ನಲ್ಲಿ ಎರಡು ತಿಂಗಳುಗಳ ಕಾಲ ವಾಸ್ತವ್ಯ ಹೂಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.