
ಕಿತ್ತೂರು ಉತ್ಸವ: ಜ್ಯೋತಿ ಯಾತ್ರೆಗೆ CM ಚಾಲನೆ
ಬೆಂಗಳೂರು, ವಿಧಾನಸೌಧದ ಮುಂಭಾಗದಲ್ಲಿ ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ನಮ್ಮನ ಕಿತ್ತೂರು ಉತ್ಸವ 2023ರ ಅಂಗವಾಗಿ ಆಯೋಜಿಸಲಾದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.ಚನ್ನಮ್ಮನ ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾತಂತ್ರ್ಯದ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ವೀರ ನಾರಿ ಕಿತ್ತೂರು ರಾಣಿ ಚನ್ನಮ್ಮ ಯುವಜನರಿಗೆ ಸ್ಪೂರ್ತಿ ಮತ್ತು ಪ್ರೇರಣೆ. ಪ್ರತಿಯೊಬ್ಬರೂ ಈ ನಾಡು ಮತ್ತು ನೆಲವನ್ನು ಪ್ರೀತಿಸಬೇಕು. ಇದು ಪ್ರತಿ…