ಕಟೀಲ್, ಕುಮಾರಸ್ವಾಮಿ ನ್ಯಾಯಾಧೀಶರಲ್ಲ: ಡಿ.ಕೆ.

ಬೆಳಗಾವಿ
“ನನ್ನನ್ನು ಜೈಲಿಗೆ ಕಳುಹಿಸಲು ನಳೀನ್ ಕುಮಾರ್ ಕಟೀಲ್ ಆಗಲಿ, ಕುಮಾರಸ್ವಾಮಿ ಅವರಾಗಲಿ ನ್ಯಾಯಾಧೀಶರಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ನಗರದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಶಿವಕುಮಾರ್ ಅವರು ಎರಡನೇ ಬಾರಿಗೆ ತಿಹಾರ್ ಜೈಲಿಗೆ ಹೋಗಲು ಸಿದ್ಧತೆ ಮಾಡಿಕೊಳ್ಳಲಿ” ಎಂಬ ಕಟೀಲ್ ಅವರ ಹೇಳಿಕೆ ಬಗ್ಗೆ ಕೇಳಿದಾಗ ಅವರು ಈ ರೀತಿ ಉತ್ತರಿಸಿದರು.


ಇನ್ನು ಸಿ.ಟಿ.ರವಿಗೆ ಲೂಟಿ ರವಿ ಎಂದು ಹೆಸರು ಕೊಟ್ಟಿದ್ದೇ ಅವರ ಪಾರ್ಟಿ. ಯಾರು ಯಾರು ಏನೇನು ಮಾತನಾಡಿದ್ದಾರೆ ಎಂಬ ದಾಖಲೆ ನನ್ನ ಬಳಿ ಇದೆ. ಸಮಯ ಬರಲಿ, ಎಲ್ಲವನ್ನೂ ಹೇಳುತ್ತೇನೆ ಎಂದರು. ಇದೇ ವೇಳೆ, ಸಿ.ಎಂ.ಇಬ್ರಾಹಿಂ ಇಂಡಿಯಾ ಮೈತ್ರಿಕೂಟ ಬೆಂಬಲಿಸುವ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ಮಹದಾಯಿ ಯೋಜನೆ ಜಾರಿಗೆ ಎದುರಾಗಿರುವ ಅಡೆತಡೆಗಳನ್ನು ಕೇಂದ್ರ ಸರ್ಕಾರ ನಿವಾರಿಸಬೇಕು. ಯೋಜನೆ ಜಾರಿಗೆ ನಾವು ಬದ್ಧ ಎಂದರು. ಬೆಳಗಾವಿಯಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. . .

.ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಈ ಬಾರಿ ಚಳಿಗಾಲ ಅಧಿವೇಶನ ನಡೆಸುತ್ತೀರಾ ಎಂಬ ಪ್ರಶ್ನೆಗೆ, ನಾಳೆ, ನಾಡಿದ್ದೋ ಕ್ಯಾಬಿನೆಟ್ ಸಭೆ ಇದೆ. ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದರು.

ಇಂದು ಈ ಭಾಗದ ವಿವಿಧ ನೀರಾವರಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳ ಸಭೆ ಮಾಡಿ ಚರ್ಚಿಸಿದ್ದೇನೆ. ಈ ಭಾಗದಲ್ಲಿ ಘಟಪ್ರಭ, ಮಾಕರ್ಂಡೇಯ, ಹಿಪ್ಪರಗಿ, ಆಲಮಟ್ಟಿ ಜಲಾಶಯಗಳಲ್ಲಿ ಶೇ.90 ರಷ್ಟು ನೀರು ತುಂಬಿದೆ.

ಮಲಪ್ರಭದಲ್ಲಿ ಮಾತ್ರ ಶೇ. 52ರಷ್ಟಿದೆ. ಈ ಭಾಗದಲ್ಲಿ ನೀರಾವರಿ ಇಲಾಖೆಯ ಹುದ್ದೆಗಳ ನೇಮಕಾತಿ ಸಮಸ್ಯೆ ಇದೆ. ಒಟ್ಟು 1322 ಹುದ್ದೆಗಳು ಮಂಜೂರಾಗಿದ್ದು, 671 ಭತರ್ಿಯಾಗಿದ್ದು, 651 ಹುದ್ದೆಗಳು ಖಾಲಿ ಇವೆ. ಬೆಂಗಳೂರಿಗೆ ಹೋದ ಮೇಲೆ ಈ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳುತ್ತೇನೆ ಎಂದರು.
ಯಾವ ಕಾಮಗಾರಿಗಳನ್ನು ಉಳಿಸಿಕೊಳ್ಳಬೇಕು, ಯಾವ ಅನಗತ್ಯ ಕಾಮಗಾರಿಗಳನ್ನು ಕೈಬಿಡಬೇಕು ಎಂಬುದರ ಬಗ್ಗೆ ಸಭೆ ಮಾಡಿ ತೀಮರ್ಾನಿಸುತ್ತೇವೆ ಎಂದು ಅವರು ಹೇಳಿದರು.


ನೀರು ಬಳಕೆದಾರರ ಸಂಘದ ಚಟುವಟಿಕೆಗಳು ಸರಿಯಾಗಿ ನಡೆಯುತ್ತಿಲ್ಲ. ಮುಂದಿನ ನೂರು ದಿನಗಳಲ್ಲಿ ಎಲ್ಲಾ ಕಡೆ ನೀರು ಬಳಕೆದಾರರ ಸಂಘ ಸ್ಥಾಪನೆಯಾಗಬೇಕು ಎಂದು ಕಾಡಾ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಈ ಮೂಲಕ ಸೂಚನೆ ನೀಡುತಿದ್ದೇನೆ. ಚಟುವಟಿಕೆ ನಡೆಯದ ಕಡೆ ಮತ್ತೆ ಚುನಾವಣೆ ಮಾಡಿ ಪುನರಾರಂಭಿಸಬೇಕು ಎಂದು ಸೂಚನೆ ನೀಡಿದರು.
ಕೆನಾಲ್ ರಿಪೇರಿ ವಿಚಾರವಾಗಿ ಗ್ರಾಮೀಣಾಭಿವೃದ್ಧಿ ಇಲಾಖೆ ಜೊತೆ ಮಾತನಾಡುತ್ತೇವೆ. ನರೇಗಾ ಮೂಲಕ ಸ್ಥಳೀಯರ ಮೂಲಕ ಕಾಮಗಾರಿಗಳನ್ನು ಮಾಡುವ ಬಗ್ಗೆ ಚರ್ಚ ಮಾಡಿದ್ದೇವೆ.
ಇನ್ನು ವಾಲ್ಮಿ ತರಬೇತಿಗೆ ಧಾರವಾಡಕ್ಕೆ ಹೋಗಬೇಕಾಗಿದೆ. ರಾಜ್ಯದ ಆಯಾ ಭಾಗಗಳಲ್ಲಿ ವಾಲ್ಮಿ ತರಬೇತಿ ಕೇಂದ್ರಗಳನ್ನು ಆರಂಭಿಸಿ ಅಲ್ಲೇ ತರಬೇತಿ ನೀಡುವ ಬಗ್ಗೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಇದನ್ನು ಪರಿಗಣಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ತರಬೇತಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದರು.
ಎಲ್ಲೆಲ್ಲಿ ಮೂಲಭೂತ ಸೌಕರ್ಯ ಇರುವುದಿಲ್ಲವೇ ಅಂತಹ ಪ್ರದೇಶಗಳಲ್ಲಿ ಸಂಸ್ಥೆಗಳ ಜೊತೆ ಒಡಂಬಡಿಕೆ ಮಾಡಿಕೊಂಡು ತರಬೇತಿ ನೀಡುವ ವ್ಯವಸ್ಥೆ ಮಾಡಲು ಕಾರ್ಯಕ್ರಮ ರೂಪಿಸಲಾಗುವುದು. ಎಲ್ಲಾ ಸೊಸೈಟಿ ಸಭೆಗಳಲ್ಲಿ ಎಇಇಗಳು ಭಾಗವಹಿಸಬೇಕು ಎಕ್ಸಿಕ್ಯೂಟಿವ್ ಇಂಜಿನಿಯರ್ ಉಸ್ತುವಾರಿ ನೋಡಿಕೊಳ್ಳಬೇಕು. ನೀರಾವರಿ ಇಲಾಖೆ ಹಾಗೂ ಕಾಡಾ ಎರಡೂ ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದರು.
ರೈತರಿಗೆ ಭೂಮಿ ಹೇಗೆ ಬಳಕೆಯಾಗಬೇಕು. ಈ ಭಾಗದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯಲಾಗುತ್ತಿದ್ದು, ಇದಕ್ಕೆ ನೀರು ಪೂರೈಸಬೇಕು. ಹೊಸ ಕೆರೆ ಹಾಗೂ ಕೆನಾಲ್ ಗಳಿಂದ ನೀರು ಕದಿಯದಂತೆ ರಕ್ಷಣೆ ಮಾಡಲು ಕಾನೂನು ತರಲಾಗುವುದು. ಈ ವಿಚಾರವಾಗಿ ಮಹಾರಾಷ್ಟ್ರದಲ್ಲಿರುವ ವ್ಯವಸ್ಥೆ ಬಗ್ಗೆ ಅಧಿಕಾರಿಗಳು ಗಮನಸೆಳೆದಿದ್ದು, ಈ ಬಗ್ಗೆ ವರದಿ ನೀಡುವಂತೆ ತಿಳಿಸಿದ್ದೇನೆ. ಸಾಧ್ಯವಾದರೆ ನಾನು ಕೂಡ ಹೋಗಿ ನೋಡಿಕೊಂಡು ಬರುತ್ತೇನೆ” ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!