ಬೆಳಗಾವಿ.
ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಸುಮಾರು 200 ಕ್ಕಿಂತಲೂ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ದುರ್ದೈವದ ಸಂಗತಿಯಾಗಿದೆ ಎಂದು ರಾಜ್ಯಸಭಾ ಸದಸ್ಯರೂ ಆಗಿರುವ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಜಿಲ್ಲಾ ಮಂತ್ರಿಗಳು ನಾಪತ್ತೆ*
ವಿದ್ಯುತ್ ಅಭಾವ, ರೈತರ ಆತ್ಮಹತ್ಯೆ ಹಾಗೂ ಬರ ಪೀಡಿತ ಪ್ರದೇಶದ ರೈತರ ಸಹಾಯಕ್ಕೆ ಬರಬೇಕಾದ ಸರ್ಕಾರ ಮತ್ತು ಉಸ್ತುವಾರಿ ಮಂತ್ರಿಗಳು ಯಾವುದೇ ಜಿಲ್ಲೆಗಳಿಗೆ ಭೇಟಿ ನೀಡಿಲ್ಲ. ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ. ಹೀಗಾಗಿ ರೈತನ ಬದುಕು ಅತ್ಯಂತ ಅಸಹನಿಯವಾಗಿದೆ ಎಂದು ಕಡಾಡಿ ಹೇಳಿದರು,

ಆದ್ದರಿಂದ ರೈತರು ಕೃಷಿ ಪಂಪಸೆಟ್ ಗಳಿಗೆ ಸ್ವಂತ ಖರ್ಚಿನಲ್ಲಿಯೇ ಹೊಸ ಸಂಪರ್ಕ ಪಡೆಯುವ ಆದೇಶವನ್ನು ಸರ್ಕಾರ ರದ್ದುಗೊಳಿಸಿ, ಈ ಹಿಂದಿನಂತೆಯೇ ವಿದ್ಯುತ್ ಸಂಪರ್ಕ ನೀಡಬೇಕು ಎಂದು ಆಗ್ರಹಿಸಿದರು.

ಒಂದು ವೇಳೆ ಈ ಆದೇಶವನ್ನು ಹಿಂಪಡೆಯದಿದ್ದರೆ ರಾಜ್ಯದ ಸುಮಾರು 35 ಲಕ್ಷ ಪಂಪ್ ಸೆಟ್ಗಳ ರೈತ ಬಳಕೆದಾರರೊಂದಿಗೆ ಬಿಜೆಪಿ ರೈತ ಮೋರ್ಚಾ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು
ಈ ಹಿಂದಿನ ರೈತ ಪರವಾದ ಯೋಜನೆಗಳಾದ ಕಿಸಾನ್ ಸಮ್ಮಾನ ನಿಧಿ, ರೈತ ವಿದ್ಯಾನಿಧಿ, ಭೂ ಚೇತನ, ಭೂ ಸರಿ, ರೈತ ಶಕ್ತಿ, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸೇರಿದಂತೆ ಅನೇಕ ಯೋಜನೆಗಳನ್ನು ಅನುದಾನದ ಕೊರತೆ ಎಂಬ ನೆಪವೊಡ್ಡಿ ರದ್ದು ಮಾಡಲಾಗಿದೆ ಎಂದು ಅವರು ಹೇಳಿದರು.

*ಬರೀ ಸಿಎಂ ಕುರ್ಚಿ ಮಾತು,,!*

ಅಧಿಕಾರಕ್ಕೆ ಬಂದ ಐದು ತಿಂಗಳಲ್ಲಿ ಯಾರು ಸಿಎಂ ಆಗಬೇಕು. ಎಷ್ಟು ಮಂದಿಯನ್ನು ಹೊಸದಾಗಿ ಡಿಸಿಎಂ ಮಾಡಬೇಕೆಂದಷ್ಟೇ ಚರ್ಚೆ ಮಾಡುತ್ತಿದ್ದಾರೆಂದು ಸಂಸದ ಈರಣ್ಣ ಕಡಾಡಿ ವ್ಯಂಗ್ಯವಾಡಿದರು,.
ಸಿದ್ದರಾಮಯ್ಯ ಅವರು ಎಷ್ಟು ದಿನ ಅಧಿಕಾರದಲ್ಲಿ ಇರುತ್ತೇನೆ ಎಂದು ಆತಂಕಗೊಂಡಿದ್ದು, ಇದರಿಂದಾಗಿಯೇ ರಾಜ್ಯದ ರೈತರ ಸಮಸ್ಯೆಗಳತ್ತ ಗಮನ ಹರಿಸುತ್ತಿಲ್ಲ ಎಂದರು. .
ಯಾವ ಕೆಲಸವೂ ನಿಂತಿಲ್ಲ…!*
ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನ ಆಯ್ಕೆ ವಿಳಂಬ ಕುರಿತು ಮಾತನಾಡಿದ ಕಡಾಡಿ, ಅವರವರ ಇತಿಮಿತಿಯೊಳಗೆ ನಮ್ಮ ಶಾಸಕರು, ಪದಾಧಿಕಾರಿಗಳು ದಿನನಿತ್ಯ ಹೋರಾಟ ಮಾಡುತ್ತಿದ್ದೇವೆ.

ಹಾಗಾಗಿ, ಯಾವುದೂ ಕೆಲಸ ನಿಂತಿಲ್ಲ ಎಂದು ಈರಣ್ಣ ಕಡಾಡಿ ಹೇಳಿದರು. ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಬಣಗಳೇ ಇಲ್ಲ. ಇದು ಕೇವಲ ಮಾಧ್ಯಮಗಳ ಸೃಷ್ಟಿ ಎಂದರು.
—-
*ಬಿಜೆಪಿ ಬರ ಅಧ್ಯಯನ ತಂಡ ಭೆಟ್ಟಿ*
ಇದೇ ತಿಂಗಳು 16 ಮತ್ತು 17ರಂದು ಬೆಳಗಾವಿ ಜಿಲ್ಲೆಗೆ ಪಕ್ಷದ ರಾಜ್ಯ ಬರ ಅಧ್ಯಯನ ತಂಡ ಭೆಟ್ಟಿ ನೀಡಲಿದೆ ಎಂದು ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಹೇಳಿದರು.

ಅರವಿಂದ ಲಿಂಬಾವಳಿ, ರಮೇಶ್ ಜಾರಕಿಹೊಳಿ, ಸಂಸದೆ ಮಂಗಲಾ ಅಂಗಡಿ, ಈರಣ್ಣ ಕಡಾಡಿ, ಶಶಿಕಲಾ ಜೊಲ್ಲೆ, ಪ್ರಭಾಕರ ಕೋರೆ, ರಮೇಶ್ ಕತ್ತಿ, ದುರ್ಯೋಧನ ಐಹೊಳೆ, ಅಭಯ್ ಪಾಟೀಲ, ಹಣಮಂತ ನಿರಾಣಿ ಈ ತಂಡದಲ್ಲಿರುತ್ತಾರೆಂದರು,.
ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಅನಿಲ್ ಬೆನಕೆ, ಧನಂಜಯ್ ಜಾಧವ್, ದಾದಾಗೌಡ ಬಿರಾದಾರ, ಎಫ್.ಎಸ್. ಸಿದ್ದನಗೌಡರ, ಸೇರಿದಂತೆ ಮತ್ತಿತರರು ಇದ್ದರು