ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಅವರ ಅಭಿನಂದನೆ ಸಮಾರಂಭ.
ಬೆಳಗಾವಿ. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ರವರನ್ನು ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿರೀಶ್ ಕೋಟೆ, ಶ್ರೀ ಕೆ ಪಿ ಪುಟ್ಟಸ್ವಾಮಯ್ಯ, ಶ್ರೀ ಕೆ ಎಸ್ ನಾಗರಾಜ್ ಸೇರಿದಂತೆ , ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಈಗ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ, ಬೆಳಗಾವಿ ಪತ್ರಕರ್ತರಿಂದ ಅಭಿಮಾನದ ಅಭಿನಂದನೆ ಜರುಗಲಿದೆ.

ಕರ್ನಾಟಕ ಕಾರ್ನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲೆಯ ಘಟಕ ಮತ್ತು ವಿವಿಧ ಪತ್ರಿಕಾ ಸಂಘಗಳಿಂದ ಬೆಳಗಾವಿ ನಗರದಲ್ಲಿ ಶನಿವಾರ, ದಿನಾಂಕ 11 ರಂದು ನೆಹರು ನಗರದಲ್ಲಿರುವ ಕನ್ನಡ ಭವನದಲ್ಲಿ ಬೆಳಿಗ್ಗೆ 11ಕ್ಕೆ ನಡೆಯಲಿದೆ ಜಗದ್ಗುರು ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಗಳ ಸಾನಿಧ್ಯ ವಹಿಸುವರು

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೋಳಿಯವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಸಮಾರಂಭದಲ್ಲಿ ಪತ್ರಿಕಾ ವಿತರಕರಿಗೆ ಸೈಕಲ್ ವಿತರಣೆಯನ್ನು ಮಾನ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿತರಣೆ ಮಾಡಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಡಾ.ಭೀಮಶಿ ಜಾರಕಿಹೋಳಿ ವಹಿಸಲಿದ್ದಾರೆ.