ಸಿಎಂ ಮಾಧ್ಯಮ ಸಲಹೆಗಾರರಿಗೆ ಅಭಿಮಾನದ ಅಭಿವಂದನೆ
ಬೆಳಗಾವಿ
:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಳಗಾವಿ ಘಟಕದ ವತಿಯಿಂದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ. ವಿ.ಪ್ರಭಾಕರ & ಗಿರೀಶ ಕೋಟೆ ಅವರಿಗೆ ಅಭಿಮಾನದ ಅಭಿವಂದನೆ ನೀಡಿ ಇಂದು ಸನ್ಮಾನಿಸಲಾಯಿತು.
ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ, ಗದಗ ಡಂಬಳ ತೋಂಟದಾರ್ಯ ಮಠದ ಶ್ರೀ ಡಾ. ಸಿದ್ದರಾಮ ಸ್ವಾಮೀಜಿ, ಎಸ್ಪಿ ಡಾ. ಭೀಮಾಶಂಕರ ಗುಳೇದ, ಶಾಸಕ ರಾಜು ಸೇಠ್, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಜಿಲ್ಲಾಧ್ಯಕ್ಷ ದಿಲೀಪ ಕುರಂದವಾಡೆ, ವಾರ್ತಾ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ, ಮಹಾನಗರ ಪಾಲಿಕೆ ಕಮಿಷ್ನರ್ ಅಶೋಕ ದುಡಗುಂಟಿ, ಸರ್ವೋತ್ತಮ ಜಾರಕಿಹೊಳಿ ಇತರರು ಉಪಸ್ಥಿತರಿದ್ದರು.
ಇತ್ತೀಚೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಹಿರಿಯ ಪತ್ರಕರ್ತರನ್ನೂ ಸನ್ಮಾನಿಸಲಾಯಿತು. ಹಿರಿಯ ಪತ್ರಿಕಾ ವಿತರಕರಿಗೆ ಹೊಸ ಸೈಕಲ್ ವಿತರಿಸಲಾಯಿತು.