Headlines

ಪೌರ ಕಾರ್ಮಿಕರೊಂದಿಗೆ ದೀಪಾವಳಿ ಆಚರಿಸಿದ ನಗರಸೇವಕ

ಬೆಳಗಾವಿ. ಮಹಾನಗರ ಪಾಲಿಕೆಯ ಎಂಎನ್ಎಸ್ ಸದಸ್ಯ ರವಿ ಸಾಳುಂಕೆ ಅವರು ತಮ್ಮ ವಾರ್ಡನ ಪೌರ ಕಾರ್ಮಿಕರೊಂದಿಗೆ ದೀಪಾವಳಿ ಹಬ್ಬ ಆಚರಿಸಿದರು . ಪೌರ ಕಾರ್ಮಿಕರಿಗೆ ಹಬ್ಬದ ಉಡುಗೊರೆ ನೀಡಿ ಶುಭ ಹಾರೈಸಿದರು.

Read More

ಉಡುಪಿಯಲ್ಲಿ ಕೊಲೆ ಬೆಳಗಾವಿಯಲ್ಲಿ ಆರೋಪಿ ಅಂದರ್

ಬೆಳಗಾವಿಉಡುಪಿಯಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಓರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ, ಕುಡಚಿಯ ಪ್ರವೀಣ್ ಅರುಣ್ ಚೌಗಲೆ ಎಂಬಾತನೇ ಬಂಧಿತ ವ್ಯಕ್ತಿ, ಅನೈತಿಕ ಸಂಬಂಧವೇ ಈ ಕೊಲೆಗೆ ಕಾರಣ ಎಂದು ಗೊತ್ತಾಗಿದೆ.ಮಹಾರಾಷ್ಟ್ರ ಸಾಂಗ್ಲಿ ಮೂಲದ ಪ್ರವೀಣ್ ಅರುಣ್ ಚೌಗಲೆ ಕುಡಚಿಯ ನೀರಾವರಿ ಇಲಾಖೆ ಅಧಿಕಾರಿ ಸಂಬಂಧಿಯೊಬ್ಬರ ಮನೆಯಲ್ಲಿ ಅಡಗಿದ್ದ ಎಂದು ಹೇಳಲಾಗಿದೆ.ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಪೊಲಿಸರು ಆರೋಪಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ

Read More

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಅಭಿನಂದನೆ ಮಹಾಪೂರ

ಬೆಂಗಳೂರು ಭಾರತೀಯ ಜನತಾ ಪಕ್ಷ ಕರ್ನಾಟಕ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ವಿಜಯೆಂದ್ರ ಯಡಿಯೂರಪ್ಪ ಅವರನ್ನು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಚವ್ಹಾಣ ಅವರು ಬೆಂಗಳೂರಿನಲ್ಲಿ‌ ಭೇಟಿಯಾಗಿ ಹೂಗುಚ್ಚ ನೀಡಿ ಅಭಿನಂದಿಸಿದರು. ಬಳಿಕ ಮಾತನಾಡಿ, ಅವರ ತಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಂತೆ ಅತ್ಯಂತ ಕ್ರಿಯಾಶೀಲವಾಗಿ, ಸಂಘಟನಾ ಚತುರರಾಗಿ ಜನರನ್ನು ಆಕರ್ಷಿಸುವ ಶಕ್ತಿಯನ್ನು ವಿಜಯೇಂದ್ರ ಹೊಂದಿದ್ದಾರೆ. ಅವರ ಕೆಲಸವನ್ನು ಗಮನಿಸಿಯೇ ವರಿಷ್ಠರು ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಾರೆ. ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಲಿದ್ದಾರೆ ಎಂದರು….

Read More

ರೈತರ ಪರ ಮಾತಾಡಿದ ಸಚಿವೆ ಲಕ್ಷ್ಮೀ..!

ನೀರು ಸಂಸ್ಕರಣಾ ಘಟಕ: ರೈತರ ಪರ ಧ್ವನಿ ಎತ್ತಿದ ಸಚಿವರು ಹೆಚ್ಚಿನ ಪರಿಹಾರ ನೀಡಲು ಕೋರಿ ಹೊಸದಾಗಿ ಪ್ರಸ್ತಾವನೆ ಸಲ್ಲಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಬೆಳಗಾವಿ : ಒಳಚರಂಡಿ ನೀರು ಸಂಸ್ಕರಣಾ ಘಟಕ ನಿರ್ಮಾಣಕ್ಕಾಗಿ ಜಮೀನು ನೀಡಿರುವ ಹಲಗಾ ಗ್ರಾಮದ ರೈತರ ಪರವಾಗಿ ಗಟ್ಟಿಯಾಗಿ ಧ್ವನಿ ಎತ್ತಿರುವ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಹೆಚ್ಚಿನ ಪರಿಹಾರ ನೀಡುವಂತೆ ಕೋರಿ ಸರಕಾರಕ್ಕೆ ಹೊಸದಾಗಿ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬುಧವಾರ ಜಿಲ್ಲಾಧಿಕಾರಿ…

Read More

ತೆಲಂಗಾಣದಲ್ಲಿ ಚನ್ನರಾಜ ಓಟ..!

ತೆಲಂಗಾಣ ವಿಧಾನಸಭೆ ಚುನಾವಣೆ ಕಾರ್ಯತಂತ್ರದಲ್ಲಿ ಚನ್ನರಾಜ ಹಟ್ಟಿಹೊಳಿ ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ವೀಕ್ಷಕರಾಗಿ ನೇಮಕವಾಗಿರುವ ಬೆಳಗಾವಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಹೈದರಾಬಾದ್ ನಲ್ಲಿರುವ ಟಿಪಿಸಿಸಿ ಕಚೇರಿಗೆ ಭೇಟಿ ನೀಡಿ ಪೂರ್ವಭಾವಿ ಸಭೆ ನಡೆಸಿದರು. ವನಪರ್ತಿ ವಿಧಾನಸಭಾ ಕ್ಷೇತ್ರಕ್ಕೆ ಚನ್ನರಾಜ ಹಟ್ಟಿಹೊಳಿ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಕ್ಷೇತ್ರದ ಹಾಗೂ ಅಭ್ಯರ್ಥಿಯ ಮಾಹಿತಿ ಪಡೆದು, ಸ್ಥಳೀಯ ಮುಖಂಡರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಅವರು, ಕರ್ನಾಟಕದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯತಂತ್ರಗಳ ಕುರಿತು ವಿವರಿಸಿದರು….

Read More
error: Content is protected !!