Headlines

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಅಭಿನಂದನೆ ಮಹಾಪೂರ

ಬೆಂಗಳೂರು ಭಾರತೀಯ ಜನತಾ ಪಕ್ಷ ಕರ್ನಾಟಕ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ವಿಜಯೆಂದ್ರ ಯಡಿಯೂರಪ್ಪ ಅವರನ್ನು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಚವ್ಹಾಣ ಅವರು ಬೆಂಗಳೂರಿನಲ್ಲಿ‌ ಭೇಟಿಯಾಗಿ ಹೂಗುಚ್ಚ ನೀಡಿ ಅಭಿನಂದಿಸಿದರು.

ಬಳಿಕ ಮಾತನಾಡಿ, ಅವರ ತಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಂತೆ ಅತ್ಯಂತ ಕ್ರಿಯಾಶೀಲವಾಗಿ, ಸಂಘಟನಾ ಚತುರರಾಗಿ ಜನರನ್ನು ಆಕರ್ಷಿಸುವ ಶಕ್ತಿಯನ್ನು ವಿಜಯೇಂದ್ರ ಹೊಂದಿದ್ದಾರೆ. ಅವರ ಕೆಲಸವನ್ನು ಗಮನಿಸಿಯೇ ವರಿಷ್ಠರು ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಾರೆ. ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಲಿದ್ದಾರೆ ಎಂದರು.

ಶಿಕಾರಿಪುರ ಕ್ಷೇತ್ರದ ಶಾಸಕರಾಗಿರುವ ವಿಜಯೆಂದ್ರ ಅವರು ಯುವ ಸಂಘಟಕರಾಗಿದ್ದು ಈ ಹಿಂದೆ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಪಾಧ್ಯಕ್ಷರಾಗಿ ಸೇವೆಗೈದು ಪಕ್ಷದ ಸರ್ವರೂ ಇಷ್ಟಪಡುವ ಮತ್ತು ಎಲ್ಲಾ ಸಮುದಾಯದವರು ಬೆಂಬಲಿಸುವ ನಾಯಕರಾಗಿದ್ದಾರೆ. ಇವರ ನೇಮಕದಿಂದ‌ ಪಕ್ಷಕ್ಕೆ ಹೊಸ ಚೈತನ್ಯ ಸಿಕ್ಕಿದೆ ಇವರ ನೇತೃತ್ವದಲ್ಲಿ ಪಕ್ಷವು ಇನ್ನಷ್ಟು ಬಲಿಷ್ಠವಾಗಿ ಬೆಳೆಯಲಿದೆ‌ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಸವಕಲ್ಯಾಣ ಕ್ಷೇತ್ರದ ಶಾಸಕರಾದ ಶರಣು ಸಲಗರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!