ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ಗೆ ಪ್ರತಿಪಕ್ಷ ನಾಯಕನ ಸ್ಥಾನ ಒಲಿದಿದೆ. ಹೈಕಮಾಂಡ್ ಕಳುಹಿಸಿದ್ದ ವೀಕ್ಷಕರ ಸಮ್ಮುಖದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರತಿಪಕ್ಷ ನಾಯಕನಾಗಿ ಅಶೋಕ್ ಅವರನ್ನು ಘೋಷಣೆ ಮಾಡಲಾಗಿದೆ.

ಏಳು ಬಾರಿ ಬಿಜೆಪಿ ಶಾಸಕರಾಗಿರುವ ಅಶೋಕ್ ಅವರು ಜುಲೈ 2012 ರಿಂದ ಮೇ 2013 ರವರೆಗೆ ಬಿಜೆಪಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಆಗಿದ್ದರು. ಅಲ್ಲದೆ, ಸಂಪುಟ ಸದಸ್ಯರಾಗಿ ಐವರು ಮುಖ್ಯಮಂತ್ರಿಗಳೊಂದಿಗೆ ಕೆಲಸ ಮಾಡುವ ಅವಕಾಶ ಅಶೋಕ್ಗೆ ಸಿಕ್ಕಿತ್ತು. ಸಚಿವರಾಗಿ ಗೃಹ, ಕಂದಾಯ, ಪೌರಾಡಳಿತ, ಸಾರಿಗೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮುಂತಾದ ವಿವಿಧ ಖಾತೆಗಳನ್ನು ನಿರ್ವಹಿಸಿದ್ದಾರೆ.
.