ಆಧ್ಯಾತ್ಮಿಕ ತಳಹದಿ ಇಲ್ಲದ ನ್ಯಾಯ ಗಟ್ಟಿಯಾಗಿ ನಿಲ್ಲುವುದಿಲ್ಲ – ಸ್ವರ್ಣವಲ್ಲೀ ಶ್ರೀಗಳು
ಬೆಳಗಾವಿ: ನೈತಿಕತೆ ಮತ್ತು ಕಾನೂನು ಎರಡೂ ಪರಸ್ಪರ ಹತ್ತಿರದ ಶಬ್ಧಗಳು. ಆಧ್ಯಾತ್ಮಿಕತೆ ಇಲ್ಲದ ನ್ಯಾಯ ಗಟ್ಟಿಯಾಗಿ ನಿಲ್ಲುವುದಿಲ್ಲ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಹೇಳಿದ್ದಾರೆ.ಭಗವದಗೀತೆ ಅಭಿಯಾನದ ಅಂಗವಾಗಿ ಬೆಳಗಾವಿಯ ನ್ಯಾಯಾಲಯದ ಸಂಕೀರ್ಣದ ಸಮುದಾಯ ಭವನದಲ್ಲಿ ಶನಿವಾರ ಭಗವದ್ಗೀತೆ ಮತ್ತು ಕಾನೂನು ಎನ್ನುವ ವಿಚಾರಸಂಕಿರಣದ ಸಾನ್ನಿಧ್ಯ ವಹಿಸಿ ಅವರು ಆಶಿರ್ವಚನ ನೀಡುತ್ತಿದ್ದರು. ಭಗವದ್ಗೀತೆ ಮತ್ತು ಕಾನೂನಿಗೆ ಒಳಗಿನ ಸಂಬಂಧವೂ ಇದೆ, ಹೊರಗಿನ ಸಂಬಂಧವೂ ಇದೆ. ಭಗವದ್ಗೀತೆಯ ಆಶಯ ಮತ್ತು ಕಾನೂನಿನ ಆಶಯ ಎರಡೂ…