.
13 ಕ್ಕೆ ಪಂಚಮಸಾಲಿ ಮೀಸಲಾತಿ ಹೋರಾಟ
ಬೆಳಗಾವಿ.
ಗಡಿನಾಡ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಬಾಕಿ ದಿನಗಳಲ್ಲಿ ನಡೆಯುವ ಪ್ರತಿಭಟನೆಗಳು ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಿವೆ.
ಬಹುಮುಖ್ಯವಾಗಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹೋರಾಟ ಇದೇ ದಿ 13 ರಂದು ತೀವೃಗೊಳ್ಳುವ ಸಾಧ್ಯತೆಗಳಿವೆ.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಸರ್ಕಾರ ಮೀನಾಮೇಷ ಎಣಿಸುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಹಿಂದಿನ ಸರ್ಕಾರ ನಮಗೆ 2ಡಿ ಮೀಸಲಾತಿ ಘೋಷಣೆ ಮಾಡಲಾಗಿತ್ತು. ಅದಿನ್ನೂ ಅನುಷ್ಠಾನಕ್ಕೆ ಬಂದಿಲ್ಲ. ಜೊತೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಮಾಜದ ಮುಖಂಡರ ಸಭೆ ಕರೆದು ತೀರ್ಮಾನ ಮಾಡುತ್ತೇವೆ ಎಂದು ಮಾತು ಕೊಟ್ಟು ತಪ್ಪಿದ್ದಾರೆ. ಈ ಸಂಬಂಧ ಸರ್ಕಾರವನ್ನು ಎಚ್ಚರಿಸಲು ಡಿಸೆಂಬರ್? 13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಸಮಾಜದ ಸಭೆಯಲ್ಲಿ ಮೀಸಲಾತಿ ಹೋರಾಟದ ಬಗ್ಗೆ ಚರ್ಚೆ ಮಾಡಿದ್ದೆವು. ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಗಿತ್ತು. ಆದಷ್ಟು ಬೇಗನೆ ಸಿಎಂ ಪಂಚಮಸಾಲಿ ಮುಖಂಡರು ಒಳಗೊಂಡು ಬೆಂಗಳೂರಿನಲ್ಲಿ ಸಭೆ ಮಾಡುವುದಾಗಿ ಭರವಸೆ ನೀಡಿದ್ದರು. ಅವತ್ತಿನಿಂದ ಇವತ್ತಿನವರೆಗೂ ನಮ್ಮ ಮನವಿಗೆ ಸಿಎಂ ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ ಎಂದು ಆರೋಪಿಸಿದರು.