ಪಾಲಿಕೆ ಪಿಡಬ್ಲುಡಿ ಸಮಿತಿಯಲ್ಲಿ ಮಹತ್ವದ ನಿರ್ಧಾರ
ಪ್ಲ್ಯಾಸ್ಟಿಕ್ ಬಳಸಿ ರಸ್ತೆ ನಿರ್ಮಾಣಕ್ಕೆ ಅಸ್ತು
ಬೆಳಗಾವಿ.
ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ದಿನನಿತ್ಯ ಸಂಗ್ರಹವಾಗುತ್ತಿರುವ ಪ್ಲಾಸ್ಟಿಕ್ ಉಪಯೋಗಿಸಿ ರಸ್ತೆ ನಿರ್ಮಿಸುವ ವಿನೂತನ ಯೋಜನೆ ಕೈಗೆತ್ತಿಕೊಳ್ಳಲು ನಗರ ಯೋಜನೆ ಮತ್ತು ಅಭಿವೃದ್ಧಿಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ,.

ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ವಾಣಿ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.
ಪ್ರಾಯೋಗಿಕವಾಗಿ ಮಹಾನಗರ ಪಾಲಿಕೆಯ ಮುಂಭಾಗದಲ್ಲಿರುವ ರಸ್ತೆಯನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ.

ಸಂಶೋಧನೆ ಮತ್ತು ನಿಯತಕಾಲಿಕೆ ಪ್ರಕಾರ ಶೇ 6 ರಿಂದ 8 ರಷ್ಟು ಪ್ಲಾಸ್ಟಿಕ್ ತ್ಯಾಜ್ಯವನ್ನು ಬಳಸಿ ನಿರ್ಮಿಸುವ ರಸ್ತೆಯು ಡಾಂಬರೀಕರಣ ರಸ್ತೆಗಳಿಗಿಂತ ನಿರ್ಮಾಣ ವೆಚ್ಚ, ಬಾಳಿಕೆ ಹಾಗೂ ಗುಣಮಟ್ಟದಲ್ಲಿ ಉತ್ತಮವಾಗಿರುತ್ತದೆ ಎಂದು ಸಭೆಯಲ್ಲಿ ಅಧ್ಯಕ್ಷರು ತಿಳಿಸಿದರು.
ಈ ಯೋಜನೆಯನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಿದ ನಂತರ ಅದರ ಗುಣಮಟ್ಟ ಹಾಗೂ ಬಾಳಿಕೆಯನ್ನು ಆಧರಿಸಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಇತರ ರಸ್ತೆಗಳನ್ನು ನಿರ್ಮಿಸು ಯೋಜನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಅಧ್ಯಕ್ಷೆ ವಾಣಿ ವಿಲಾಸ ಜೋಶಿ ತಿಳಿಸಿದರು.
ಸಭೆಯಲ್ಲಿ ಉಪಮೇಯರ್ ರೇಷ್ಮಾ ಪಾಟೀಲ, ಪಾಲಿಕೆ ಪರಿಷತ್ ಕಾರ್ಯದರ್ಶಿ ಉದಯಕುಮಾರ ತಳವಾರ್, ಅಭಿಯಂತೆ ಲಕ್ಷ್ಮೀ ನಿಪ್ಪಾಣಿಕರ ಮುಂತಾದವರು ಉಪಸ್ಥಿತರಿದ್ದರು