ಭಗವದ್ಗೀತಾ ಅಭಿಯಾನಕ್ಕೆ ಕ್ಷಣಗಣನೆ
ಬೆಳಗಾವಿ. ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ವತಿಯಿಂದ ರಾಜ್ಯಾದ್ಯಂತ ಕಳೆದ ಒಂದು ತಿಂಗಳಿಂದ ನಡೆದಿರುವ ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ ಕಾರ್ಯಕ್ರಮ ಡಿ.23ರಂದು ಸಂಜೆ 4 ಗಂಟೆಗೆ ನಗರದ ಲಿಂಗರಾಜ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಸದೃಢ ಸಮಾಜದ ನಿರ್ಮಾಣಕ್ಕೆ ಆಧ್ಯಾತ್ಮ ವಿದ್ಯೆಯ ಆಕರವಾದ ಭಗವದ್ಗೀತೆಯ ಮೂಲಕ ಸಂಸ್ಕಾರ ನೀಡಿ ಸುಸಂಸ್ಕೃತ ಸಮಾಜದ ನಿರ್ಮಾಣದ ಆಶಯದೊಂದಿಗೆ ಸೊಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಪೀಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವರು 2007ರ ಅಕ್ಟೋಬರ್ ನಲ್ಲಿ ರಾಜ್ಯಾದ್ಯಂತ ಭಗವದ್ಗೀತಾ ಅಭಿಯಾನವನ್ನು ಪ್ರಾರಂಭಿಸಿದರು. ಈ ಬಾರಿ ರಾಜ್ಯ…