ರಾಹುಲ್ ಗಾಗಿ ಗೃಹಲಕ್ಷ್ಮೀ ಶಿಫ್ಟ್.
ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಭೇಟಿ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಗೃಹಲಕ್ಷ್ಮೀ ಯೋಜನೆ ಉದ್ಘಾಟನಾ ಸಮಾರಂಭವನ್ನು ಮೈಸೂರಿನಲ್ಲಿ ಆಯೋಜಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕಾರ್ಯಕ್ರಮವನ್ನು ಬೆಳಗಾವಿಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿತ್ತು ಆದರೆ ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ನಿರ್ಣಯದಂತೆ ಮೈಸೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ…