ಬೆಳಗಾವಿ,:
ನಗರದ ಸ್ವಚ್ಛತೆ ಕಾಪಾಡಿ, ಹಿರಿಮೆ ಹೆಚ್ಚಿಸಲು ಪೌರ ಕಾರ್ಮಿಕರ ಪಾತ್ರ ಬಹಳಷ್ಟಿದೆ. ಅವರ ಹಿತ ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ರಾಜ್ಯದಲ್ಲಿ ಶೇಕಡಾ 70% ರಷ್ಟು ಪೌರ ಕಾರ್ಮಿಕರನ್ನು ಈಗಾಗಲೇ ಖಾಯಂಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ಹಂತ ಹಂತವಾಗಿ ಖಾಯಂಗೊಳಿಸಿ ನೇಮಕಾತಿ ಆದೇಶ ನೀಡಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಹೇಳಿದರು.

ನಗರಾಭಿವೃದ್ದಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು ಹಾಗೂ ಜಿಲ್ಲಾಡಳಿತ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ (ಜ.02) ನಡೆದ ಬೆಳಗಾವಿ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರ ನೇಮಕಾತಿ ಆದೇಶಪತ್ರಗಳನ್ನು ವಿತರಿಸಿ, ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕಿಂತ ಮುಂಚೆಯ ಅಧಿಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾಗ ಈಶ್ವರ್ ಖಂಡ್ರೆ ಅವರು ಪೌರಾಡಳಿತ ಸಚಿವರಿದ್ದರು ಅಂದಿನ ದಿನಗಳಲ್ಲಿ ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ಸೂಚಿಸಿದ್ದರು. ಅದರಂತೆ ಸಿಂ ಸಿದ್ದರಾಮಯ್ಯ ಅವರು ಎಲ್ಲ ಪೌರಕಾರ್ಮಿಕರನ್ನು ಖಾಯಂಗೊಳಿಸಲು ಆದೇಶ ಹೊರಡಿಸಿದ್ದಾರೆ ಎಂದು ಹೇಳಿದರು.
ಇದಕ್ಕೂ ಮುಂಚೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಬೆಳಗಾವಿ ಉತ್ತರ ವಿಧಾನ ಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಚನ್ನರಾಮ ಹಟ್ಟಿಹೊಳಿ ಅವರು ಮಹಾನಗರ ಪಾಲಿಕೆ ಹಾಗೂ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿದರು

ಬೆಳಗಾವಿ ಮಹಾನಗರಪಾಲಿಕೆಯ 155 ಮತ್ತು ಬೆಳಗಾವಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ 213 ಜನ ಸೇರಿದಂತೆ ಒಟ್ಟು 368 ಪೌರಕಾರ್ಮಿಕರನ್ನು ಸರಕಾರಿ ನೌಕರರನ್ನಾಗಿ ನೇಮಕಾತಿ ಮಾಡಲಾದ ನೇಮಕಾತಿ ಆದೇಶಪತ್ರಗಳನ್ನು ವಿತರಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್, ಬೆಳಗಾವಿ ಮಹಾಪೌರರಾದ ಶೋಭಾ ಸೋಮನಾಚೆ, ಉಪ ಮಹಾಪೌರರಾದ ರೇಶ್ಮಾ ಪಾಟೀಲ, ಆರೋಗ್ಮಯ ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ ಜೋಶಿ, ಆಡಳಿತ ಪಕ್ಷದ ನಾಯಕ ರಾಜಶೇಖರ ಡೋಣಿ, ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಉಪ ಆಯುಕ್ತೆ ರೇಷ್ಮಾ ತಾಳಿಕೋಟಿ, ಮತ್ತಿತರರು ಉಪಸ್ಥಿತರಿದ್ದರು.
.
: